ADVERTISEMENT

ರಾಜಸ್ಥಾನದಿಂದ ಸೋನಿಯಾ ಗಾಂಧಿ ರಾಜ್ಯಸಭೆಗೆ: ನಾಳೆ ನಾಮಪತ್ರ ಸಲ್ಲಿಸುವ ಸಂಭವ

ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ ರಾಜಸ್ಥಾನದಿಂದ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಇಂದು ಸಂಜೆ ಖಚಿತಪಡಿಸಿವೆ.

ಪಿಟಿಐ
Published 13 ಫೆಬ್ರುವರಿ 2024, 15:58 IST
Last Updated 13 ಫೆಬ್ರುವರಿ 2024, 15:58 IST
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ   

ನವದೆಹಲಿ/ಜೈಪುರ: ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ ರಾಜಸ್ಥಾನದಿಂದ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ಇಂದು ಸಂಜೆ ಖಚಿತಪಡಿಸಿವೆ.

ನಾಮಪತ್ರ ಸಲ್ಲಿಸುವ ವೇಳೆ ಎಐಸಿಸಿ ಅಧ್ಯಕ್ಷೆ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ವಾದ್ರಾ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿವೆ.

ರಾಜಸ್ಥಾನ, ಹಿಮಾಚಲ ಪ್ರದೇಶ, ಮಧ್ಯಪ್ರದೇಶದ ಕಾಂಗ್ರೆಸ್‌ ಘಟಕಗಳು, ಮುಖಂಡರು ತಮ್ಮ ರಾಜ್ಯ ದಿಂದಲೇ ಸ್ಪರ್ಧಿಸಲು ಅವರಿಗೆ ಮನವಿ ಮಾಡಿದ್ದವು. ಈ ಪೈಕಿ ರಾಜಸ್ಥಾನ ಸುರಕ್ಷಿತ ಎಂಬ ತೀರ್ಮಾನಕ್ಕೆ ನಾಯಕರು ಬಂದಿದ್ದರಿಂದ ಕೊನೆಗೆ ಸೋನಿಯಾ ಅವರು ರಾಜಸ್ಥಾನ ಆಯ್ಕೆ ಮಾಡಿದ್ದಾರೆ.

ADVERTISEMENT

ಫೆಬ್ರುವರಿ 27 ರಂದು ಚುನಾವಣೆ ನಡೆಯಲಿದ್ದು ಫೆ.15 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಆದರೂ ಕಾಂಗ್ರೆಸ್ ತನ್ನ ಯಾವುದೇ ಅಭ್ಯರ್ಥಿಗಳ ಪಟ್ಟಿಯನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ.

ಸೋನಿಯಾ ಅವರು ಮೊದಲ ಅವಧಿಗೆ ಅಮೇಠಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಸದ್ಯ, ರಾಯ್‌ ಬರೇಲಿ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ಇಲ್ಲಿಂದ ಪ್ರಿಯಾಂಕಾಗಾಂಧಿ ಅವರು ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

2019 ರ ಸಾರ್ವತ್ರಿಕ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ಸೋನಿಯಾ ಗಾಂಧಿ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.