ADVERTISEMENT

ಆರೋಗ್ಯ ತಪಾಸಣೆಗಾಗಿ ವಿದೇಶಕ್ಕೆ ತೆರಳಿದ ಸೋನಿಯಾ ಗಾಂಧಿ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2020, 16:47 IST
Last Updated 12 ಸೆಪ್ಟೆಂಬರ್ 2020, 16:47 IST
   

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶನಿವಾರ ತಮ್ಮ ವಾರ್ಷಿಕ ಆರೋಗ್ಯ ತಪಾಸಣೆ ಗಾಗಿ, ಪುತ್ರ ರಾಹುಲ್‌ ಗಾಂಧಿ ಜತೆಗೆ ವಿದೇಶಕ್ಕೆ ತೆರಳಿದ್ದಾರೆ.

ಮುಂಗಾರು ಅಧಿವೇಶನಕ್ಕೆ ಸೋನಿಯಾ ಅವರು ಗೈರಾಗುವ ಸಾಧ್ಯತೆ ಇದೆ. ಆದರೆ ರಾಹುಲ್‌ ಗಾಂಧಿ ಅವರು ಭಾರತಕ್ಕೆ ಮರಳಲಿದ್ದು, ಆ ನಂತರ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT