ಹಿಮಪಾತವು ರೆಸಾರ್ಟ್ ಅನ್ನು ಮುಚ್ಚಿ ಹಾಕುವುದು.
ಚಿತ್ರ ಕೃಪೆ: ಪಿಟಿಐ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಪ್ರವಾಸಿ ತಾಣ ‘ಸೋನ್‌ಮಾರ್ಗ್’ನಲ್ಲಿ ಭಾರೀ ಹಿಮಪಾತವಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದೆ.
ಕಣಿವೆ ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಪ್ರಮಾಣದ ಹಿಮ ಮಳೆ ಸುರಿಯುತ್ತಿದೆ. ಇದರಿಂದಾಗಿ ಮಂಗಳವಾರ ರಾತ್ರಿ 10.12ರ ಸುಮಾರಿಗೆ ಮಧ್ಯ ಕಾಶ್ಮೀರದ ಗಂಡೇರ್ಬಲ್ ಜಿಲ್ಲೆಯ ಸೋನ್‌ಮಾರ್ಗ್ ರೆಸಾರ್ಟ್‌ನಲ್ಲಿ ಹಿಮಪಾತ ಸಂಭವಿಸಿದೆ.
ಮೇಲಿನಿಂದ ಒಮ್ಮೆಲೆ ಜಾರಿ ಬಂದ ಹಿಮ ರೆಸಾರ್ಟ್ ಅನ್ನು ಸಂಪೂರ್ಣವಾಗಿ ಮುಚ್ಚಿಹಾಕಿದೆ. ಈ ದೃಶ್ಯಗಳು ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿವೆ.
ಸೋನ್‌ಮಾರ್ಗ್ ಸೇರಿದಂತೆ ಕಣಿವೆಯ ಇತರ ಭಾಗಗಳಲ್ಲಿ ಕಳೆದ 24 ಗಂಟೆಯಲ್ಲಿ ಭಾರಿ ಪ್ರಮಾಣದ ಹಿಮ ಬೀಳುತ್ತಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಿಮಪಾತವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಸದ್ಯ ಉತ್ತರಾಖಂಡದ ಕೆಲವು ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಬದರಿನಾಥ್ ಮತ್ತು ಕೇದಾರನಾಥ ಸೇರಿದಂತೆ ಇತರೆ ಕಡೆಗಳಲ್ಲಿಯೂ ಹಿಮಪಾತವಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ.
ಜನವರಿ 23ರಂದು ಭಾರಿ ಹಿಮಪಾತ ಸಂಭವಿಸಿತ್ತು. ಎತ್ತರದ ಪ್ರದೇಶಗಳಲ್ಲಿ ಹಿಮಪಾತದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಉತ್ತರಾಖಂಡ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ.
ಈ ವಾರದಲ್ಲಿ ಚಮೋಲಿ ಜಿಲ್ಲೆಯ ಬದರಿನಾಥ್ ಮತ್ತು ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥದ ಸುತ್ತಮುತ್ತಲಿನ ಶಿಖರ ಹಾಗೂ ಉತ್ತರಕಾಶಿ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಹಿಮಪಾತವಾಗಿರುವುದು ವರದಿಯಾಗಿತ್ತು. ಸದ್ಯ ಈ ಜಿಲ್ಲೆಗಳಲ್ಲಿ ಅರೆಂಜ್ ಅಲರ್ಟ್ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.