ADVERTISEMENT

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ: ಪ್ರಾಣಾಪಾಯದಿಂದ ಪಾರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಫೆಬ್ರುವರಿ 2025, 2:28 IST
Last Updated 21 ಫೆಬ್ರುವರಿ 2025, 2:28 IST
<div class="paragraphs"><p>ಸೌರವ್ ಗಂಗೂಲಿ</p></div>

ಸೌರವ್ ಗಂಗೂಲಿ

   

ಕೋಲ್ಕತ್ತ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರ ಕಾರು ಅಪಘಾತಕ್ಕೀಡಾಗಿದೆ. ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‌ಪ್ರೆಸ್‌ವೇನಲ್ಲಿ ಗುರುವಾರ ಈ ಘಟನೆ ನಡೆದಿದೆ.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ವೇಗವಾಗಿ ಬಂದ ಲಾರಿ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ 'ಎನ್‌ಡಿಟಿವಿ' ವರದಿ ಮಾಡಿದೆ.

ADVERTISEMENT

ಅದೃಷ್ಟವಶಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಗಂಗೂಲಿ ಅವರ ಬೆಂಗಾವಲು ವಾಹನಗಳಿಗೆ ಹಾನಿಯಾಗಿದೆ.

ಲಾರಿ ಡಿಕ್ಕಿಯಾಗುತ್ತಿದ್ದಂತೆಯೇ ಗಂಗೂಲಿ ಅವರ ಕಾರಿನ ಚಾಲಕ ತಕ್ಷಣ ಬ್ರೇಕ್ ಹಾಕಿದರು. ಆಗ ಹಿಂದೆಯಿದ್ದ ಬೆಂಗಾವಲು ಪಡೆಯ ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದವು ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.