ADVERTISEMENT

ದಕ್ಷಿಣದಲ್ಲಿ ವಿಧಾನಸಭೆ ಚುನಾವಣೆಗಳು: ಗೆಲುವಿನ ನಾಗಾಲೋಟ ಮುಂದುವರಿಸಲು BJP ತಯಾರಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಡಿಸೆಂಬರ್ 2025, 10:09 IST
Last Updated 12 ಡಿಸೆಂಬರ್ 2025, 10:09 IST
<div class="paragraphs"><p>ಎನ್‌ಡಿಎ&nbsp;ಭೋಜನಕೂಟದಲ್ಲಿ ಮೋದಿ ಭಾಗಿ</p></div>

ಎನ್‌ಡಿಎ ಭೋಜನಕೂಟದಲ್ಲಿ ಮೋದಿ ಭಾಗಿ

   

ಇನ್‌ಸ್ಟಾಗ್ರಾಮ್‌ ಚಿತ್ರ 

ಬೆಂಗಳೂರು: ಮುಂಬರುವ ಕೇರಳ ಮತ್ತು ತಮಿಳುನಾಡು ವಿಧಾನಸಭೆ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟ ಕಾರ್ಯತಂತ್ರ ರೂಪಿಸುತ್ತಿದೆ. ಇದರ ಭಾಗವಾಗಿ ನಿನ್ನೆ (ಗುರುವಾರ) ಭೋಜನಕೂಟದಲ್ಲಿ ಎನ್‌ಡಿಎ ಸಂಸದರು ಹಾಗೂ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು.

ADVERTISEMENT

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಮೋದಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

'ಎನ್‌ಡಿಎ ಸಂಸದರ ಜತೆ ಭೋಜನಕೂಟದಲ್ಲಿ ಭಾಗಿಯಾಗಿದ್ದು ಸಂತಸ ತಂದಿದೆ. ಉತ್ತಮ ಆಡಳಿತ, ದೇಶದ ಅಭಿವೃದ್ಧಿ ಜತೆಗೆ ಪ್ರಾದೇಶಿಕವಾಗಿಯೂ ಮುಂದುವರಿಯುವ ಕುರಿತು ಸಂಸದರು ಅಭಿಪ್ರಾಯಗಳನ್ನು ಹಂಚಿಕೊಂಡರು' ಎಂದು ಮೋದಿ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಸಭೆಯಲ್ಲಿ ದಕ್ಷಿಣ ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಸೇರಿದಂತೆ ಕೇಂದ್ರಾಡಳಿತ ಪ್ರದೇಶ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಉಪಸ್ಥಿತರಿದ್ದರು.

ಈ ಸಭೆಯಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಕೂಡ ಭಾಗಿಯಾದ್ದರು.

ದಕ್ಷಿಣ ರಾಜ್ಯಗಳಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಬಲಪಡಿಸುವತ್ತ ಗಮನಹರಿಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಕಾರ್ಯಪ್ರವೃತ್ತರಾಗಬೇಕು. ಬಿಜೆಪಿ ದೇಶದಾದ್ಯಂತ ಭರ್ಜರಿ ಗೆಲುವು ಸಾಧಿಸುತ್ತಿರುವ ಈ ಸಮಯದಲ್ಲಿ ದಕ್ಷಿಣ ಭಾರತದಲ್ಲಿ ಚುನಾವಣೆಗಳ ಜತೆಗೆ ಜನರ ಹೃದಯ ಗೆಲ್ಲುವುದು ಮುಖ್ಯ ಎಂದು ಸಂಸದರಿಗೆ ಪ್ರಧಾನಿ ಮೋದಿ ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.