ಚೆನ್ನೈ: ಇಲ್ಲಿನ ರಸ್ತೆಯೊಂದಕ್ಕೆ ಖ್ಯಾತ ಗಾಯಕ ದಿ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಹೆಸರನ್ನು ಇಡಲಾಗಿದೆ ಎಂದು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಮಂಗಳವಾರ ಹೇಳಿದ್ದಾರೆ.
ಬಾಲಸುಬ್ರಹ್ಮಣ್ಯಂ ಅವರ ಅಭಿಮಾನಿಗಳು ಮತ್ತು ಕಟುಂಬದವರು ಈ ಬಗ್ಗೆ ಮನವಿ ಮಾಡಿದ್ದರು.
ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಈ ಮನವಿಯನ್ನು ಸಮ್ಮತಿಸಿ ಬಾಲಸುಬ್ರಹ್ಮಣ್ಯಂ ಕುಟುಂಬದವರಿರುವ ರಸ್ತೆಗೆ ಅವರ ಹೆಸರನ್ನು ಇಡಲಾಗಿದೆ ಎಂದು ಮಾಹಿತಿ ನೀಡಿದರು.
ಬಾಲಸುಬ್ರಹ್ಮಣ್ಯಂ ಸ್ಮಾರಕಕ್ಕೆ ಅಭಿಮಾನಿಗಳು ಮನವಿ ಮಾಡಿದರೆ ಖಂಡಿತವಾಗಿಯೂ ಮುಖ್ಯಮಂತ್ರಿಗಳು ಅದನ್ನು ಪರಿಗಣಿಸಿ, ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.