
ಅಖಿಲೇಶ್ ಯಾದವ್
ಕೃಪೆ: ಪಿಟಿಐ
Will give Rs 40,000 annually to poor woman if SP returns to power: Akhilesh Yadav
ಲಖನೌ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು, ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಪ್ರತಿ ವರ್ಷ ಮಹಿಳೆಯರಿಗೆ ತಲಾ ₹40,000 ಸಹಾಯಧನ ನೀಡುವುದಾಗಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.
ಬುಧವಾರ ಖಾಸಗಿ ಸುದ್ದಿವಾಹಿನಿವೊಂದರ ಕಾರ್ಯಕ್ರಮದಲ್ಲಿ ಅಖಿಲೇಶ್ ಈ ಹೇಳಿಕೆ ನೀಡಿದ್ದಾರೆ.
ಹಿಂದೆ ಇದ್ದ ಸಮಾಜವಾದಿ ಪಕ್ಷದ ಸರ್ಕಾರವು ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ ‘ಸಮಾಜವಾದಿ ಪಿಂಚಣಿ' ಯೋಜನೆಯಡಿ ತಿಂಗಳಿಗೆ ₹500ಗಳನ್ನು ನೀಡಿತ್ತು ಎಂದಿದ್ದಾರೆ.
‘2027ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ, ಬಡ ತಾಯಂದಿರು ಮತ್ತು ಸಹೋದರಿಯರಿಗೆ ವರ್ಷಕ್ಕೆ ₹40,000 ನೀಡಲಾಗುವುದು’ಎಂದು ಅವರು ತಿಳಿಸಿದ್ದಾರೆ.
ಯೋಜನೆಯ ಕಾರ್ಯಸಾಧ್ಯತೆಯನ್ನು ಸಮರ್ಥಿಸಿಕೊಂಡ ಯಾದವ್, ದೊಡ್ಡ ಕೈಗಾರಿಕೋದ್ಯಮಿಗಳಿಂದ ಬಾಕಿ ತೆರಿಗೆ ಹಣವನ್ನು ವಸೂಲಿ ಮಾಡುವ ಮೂಲಕ ಅಗತ್ಯವಿರುವ ಹಣವನ್ನು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಇತ್ತೀಚಿನ ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಭರ್ಜರಿ ಜಯ ಸಾಧಿಸಿ, ಇಂಡಿಯಾ ಬಣ ಹೀನಾಯ ಸೋಲು ಕಂಡಿತ್ತು. ಈ ಹಿನ್ನೆಲೆಯಲ್ಲಿ ಅಖಿಲೇಶ್ ಈ ಘೋಷಣೆ ಮಾಡಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
ಚುನಾವಣೆಗೆ ಮುನ್ನ, ಬಿಹಾರ ಸರ್ಕಾರ ಮಹಿಳೆಯರಿಗೆ ₹10,000ನೀಡಲು ಪ್ರಾರಂಭಿಸಿತ್ತು. ಈ ಯೋಜನೆಯು ಮಹಿಳಾ ಮತದಾರರ ಮೇಲೆ ಗಮನಾರ್ಹ ಪ್ರಭಾವ ಬೀರಿದೆ ಎಂದೇ ವಿಶ್ಲೇಷಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.