ಪ್ರಾಧಿನಿಧಿಕ ಚಿತ್ರ
ಐಸ್ಟಾಕ್ ಚಿತ್ರ
ಬಿಜ್ನೋರ್ (ಉತ್ತರ ಪ್ರದೇಶ): 2020ರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ನಗೀನಾ ಕ್ಷೇತ್ರದ ಶಾಸಕ ಮನೋಜ್ ಪರಾಸ್ ಅವರ ಜಾಮೀನು ಅರ್ಜಿಯನ್ನು ಇಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
2020ರ ಸೆಪ್ಟೆಂಬರ್ 29ರಂದು ಝಾಲು ರಸ್ತೆಯಲ್ಲಿ ತಮ್ಮ ಮೇಲೆ ಮನೋಜ್, ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ರಸೀದ್‌ಪುರ ಗರ್ಹಿಯ ಗ್ರಾಮಸ್ಥ ಛತರ್ ಸಿಂಗ್ ಅವರು ದೂರು ದಾಖಲಿಸಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾ ಸರ್ಕಾರಿ ವಕೀಲ ಜಿತೇಂದ್ರ ಚೌಹಾಣ್ ಹೇಳಿದ್ದಾರೆ.
ಇತರ ಕೆಲವು ಸಮಾಜವಾದಿ ಪಕ್ಷದ ನಾಯಕರ ಜೊತೆಗೆ, ಮಾಜಿ ಸಚಿವ ಮತ್ತು ಹಾಲಿ ಶಾಸಕರಾದ ಪರಾಸ್ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಹೆಸರಿಸಲಾಗಿದೆ.
ತರುವಾಯ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ.
ಮಂಗಳವಾರ, ಪರಾಸ್ ನ್ಯಾಯಾಧೀಶ ಶಂತನು ತ್ಯಾಗಿ ಅವರ ಪೀಠದ ಮುಂದೆ ಹಾಜರಾಗಿದ್ದರು. ಈ ವೇಳೆ ಪೀಠ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.