
ಸಾವು
(ಪ್ರಾತಿನಿಧಿಕ ಚಿತ್ರ)
ಲಖನೌ: ಉತ್ತರಪ್ರದೇಶ ರಾಜ್ಯದ ವಿಧಾನಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ ಶಾಸಕ ಸುಧಾಕರ್ ಸಿಂಗ್ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 67 ವರ್ಷ ವಯಸ್ಸಾಗಿತ್ತು.
ಸುಧಾಕರ್ ಸಿಂಗ್ ಅವರು ಮಂಗಳವಾರ ದೆಹಲಿಯಿಂದ ವಾರಾಣಸಿಗೆ ಬಂದ ಬಳಿಕ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ವಾರಾಣಸಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಲಖನೌಗೆ ಸ್ಥಳಾಂತರಿಸಲಾಗಿತ್ತು ಎಂದು ಅವರ ಪುತ್ರ ಸುಜೀತ್ ಸಿಂಗ್ ಹೇಳಿದ್ದಾರೆ.
ಗುರುವಾರ ಬೆಳಿಗ್ಗೆ 7 ಗಂಟೆಗೆ ಅವರು ವಿಧಿವಶರಾದರೆಂದು ಸುಜೀತ್ ಸಿಂಗ್ ಹೇಳಿದ್ದಾರೆ. ತಮ್ಮ ತಂದೆಗೆ ಹೃದಯ ಸಂಬಂಧಿ ಸಮಸ್ಯೆಗಳಿದ್ದವು ಎಂದು ಅವರು ತಿಳಿಸಿದ್ದಾರೆ.
ಸುಧಾಕರ್ ಸಿಂಗ್ ನಿಧನಕ್ಕೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸಂತಾಪ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.