ADVERTISEMENT

ಎಸ್‌ಪಿಬಿ ಅಪಾಯದಿಂದ ಪಾರಾಗಿದ್ದಾರೆ: ರಜನಿಕಾಂತ್‌

ಪಿಟಿಐ
Published 17 ಆಗಸ್ಟ್ 2020, 8:22 IST
Last Updated 17 ಆಗಸ್ಟ್ 2020, 8:22 IST
ರಜನಿಕಾಂತ್‌
ರಜನಿಕಾಂತ್‌   

ಚೆನ್ನೈ: ಖ್ಯಾತ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರು ಅಪಾಯದಿಂದ ಪಾರಾಗಿದ್ದಾರೆ. ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಚಿತ್ರನಟ, ಸೂಪರ್‌ಸ್ಟಾರ್‌ ರಜನಿಕಾಂತ್‌ ಹೇಳಿದ್ದಾರೆ.

‘ಬಾಲು ಸಾರ್‌ ಆದಷ್ಟು ಬೇಗ ಗುಣಮುಖರಾಗಿರಿ’ ಎಂದು ರಜನಿಕಾಂತ್‌ ಅವರು ಟ್ವೀಟ್‌ ಮಾಡಿದ್ದಾರೆ.ಅಲ್ಲದೆ ಇದರೊಂದಿಗೆ ಸಣ್ಣ ವಿಡಿಯೊವೊಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

‘ಬಾಲಸುಬ್ರಹ್ಮಣ್ಯಂ ಅವರು‌ ಅಪಾಯದಿಂದ ಪಾರಾಗಿದ್ದಾರೆ ಎಂಬ ವಿಷಯ ನನಗೆ ತುಂಬಾ ಸಂತೋಷವನ್ನು ತಂದುಕೊಟ್ಟಿದೆ. ಕಳೆದ 50 ವರ್ಷಗಳಿಂದ ಬಾಲಸುಬ್ರಹ್ಮಣ್ಯಂ ಅವರು ಹಲವು ಭಾರತೀಯ ಭಾಷೆಗಳಲ್ಲಿ‌ ಹಾಡುಗಳನ್ನು ಹಾಡಿದ್ದಾರೆ. ತಮ್ಮ ಸುಮಧುರ ಧ್ವನಿಯಿಂದ ಕೋಟ್ಯಂತರ ಜನರ ಮುಖದಲ್ಲಿ ಹರುಷ ತಂದಿದ್ದಾರೆ’ ಎಂದು ರಜನಿಕಾಂತ್‌ ಅವರು ಟ್ವೀಟ್‌ ಮಾಡಿದ್ದಾರೆ.

ADVERTISEMENT

ಕಳೆದ ಆಗಸ್ಟ್ 5ರಂದು ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಸಂಜೆ ಅವರನ್ನು ಐಸಿಯುಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.