ಶಬರಿಮಲೆ: ಅರಣ್ಯ ಮಾರ್ಗವಾಗಿ ಕಾಲ್ನಡಿಗೆಯಲ್ಲಿ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಬರುವ ಭಕ್ತರಿಗೆ ನೀಡಲಾಗುವ ವಿಶೇಷ ಪಾಸ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಿರುವುದಾಗಿ ತಿರುವಾಂಕೂರು ದೇವಸಂ ಬೋರ್ಡ್ ಹೇಳಿದೆ.
‘ವರ್ಚುವಲ್ ಕ್ಯೂ’ ವ್ಯವಸ್ಥೆ ಮತ್ತು ‘ಸ್ಪಾಟ್ ಬುಕ್ಕಿಂಗ್’ ಮಾಡಿ, ಪಂಬಾ ಮೂಲಕ ಬರುವ ಭಕ್ತರಿಗೆ ದರ್ಶನಕ್ಕೆ ವಿಳಂಬವಾಗುತ್ತಿರುವ ಕಾರಣ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ದೇವಸಂ ಬೋರ್ಡ್‌ನ ಸದಸ್ಯ ಎ.ಅಜಯ್‌ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಣ್ಯ ಮಾರ್ಗವಾಗಿ ಕಾಲ್ನಡಿಗೆಯಲ್ಲಿ ಬರುವ 5000 ಭಕ್ತರಿಗೆ ವಿಶೇಷ ಪಾಸ್ ನೀಡುವ ವ್ಯವಸ್ಥೆ ಈ ಹಿಂದೆ ಜಾರಿಯಲ್ಲಿತ್ತು. ಆದರೆ ಅರಣ್ಯ ಮಾರ್ಗವಾಗಿ ಬರುವ ಭಕ್ತರ ಸಂಖ್ಯೆ ಈಗ ಐದು ಪಟ್ಟು ಹೆಚ್ಚಾಗಿದೆ. ಈ ಕಾರಣಕ್ಕೆ ಪಾಸ್ ನೀಡುವುದನ್ನು ನಿಲ್ಲಿಸಲಾಗಿದೆ. ಮುಂದಿನ ಸೂಚನೆಯವರೆಗೆ ವಿಶೇಷ ಪಾಸ್ ವಿತರಣೆ ಮಾಡಲಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.