ಬೆಂಗಳೂರು: ಸೆಪ್ಟೆಂಬರ್ 18ರಿಂದ ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದ ಮುನ್ನಾದಿನ (ಸೆ.17ರಂದು) ಸಂಜೆ 4.30ಕ್ಕೆ ಸರ್ವ ಪಕ್ಷಗಳ ಸಭೆಯನ್ನು ಕರೆಯಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಪೂರ್ವಭಾವಿ ಸಭೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸೆಪ್ಟೆಂಬರ್ 18 ರಿಂದ ಐದು ದಿನಗಳ ಸಂಸತ್ತು ವಿಶೇಷ ಅಧಿವೇಶನದ ಕುರಿತು ಚರ್ಚಿಸಲು ಭಾನುವಾರ (ಸೆ.17ರಂದು) ಸಂಜೆ 4.30 ಕ್ಕೆ ಸರ್ವ ಪಕ್ಷಗಳ ನಾಯಕರ ಸಭೆ ಕರೆಯಲಾಗಿದೆ. ಎಲ್ಲ ನಾಯಕರಿಗೂ ಈ ಕುರಿತು ಇ-ಮೇಲ್ ಮೂಲಕ ಮಾಹಿತಿ ನೀಡಿ, ಆಹ್ವಾನಿಸಲಾಗಿದೆ ಎಂದು ಹೇಳಿದ್ದಾರೆ.
ಸಂಸತ್ತಿನ ವಿಶೇಷ ಅಧಿವೇಶನವನ್ನು ಸಪ್ಟೆಂಬರ್ 18 ರಿಂದ 22ರ ವರೆಗೆ ಕರೆಯಲಾಗಿದ್ದು ಒಟ್ಟು 5 ಅವಧಿಗಳು ಇರಲಿವೆ. 17ನೇ ಲೋಕಸಭೆಯ 13ನೇ ಅಧಿವೇಶನ ಹಾಗೂ ರಾಜ್ಯಸಭೆಯ 261ನೇ ಅಧಿವೇಶನ ಇದಾಗಿರಲಿದೆ. ಅಮೃತ್ ಕಾಲದ ಈ ಮಹತ್ವದ ಕಾಲಫಟ್ಟದಲ್ಲಿ ಒಂದು ರಚನಾತ್ಮಕ ಅಧಿವೇಶವನ್ನು ಎದುರು ನೋಡುತ್ತಿದ್ದೇವೆ ಎಂದು ಜೋಶಿ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.