ADVERTISEMENT

ಸಂಸತ್ತಿನ ವಿಶೇಷ ಅಧಿವೇಶನ: ಇಂದಿನಿಂದ ಹೊಸ ಸಂಸತ್‌ ಕಟ್ಟಡದಲ್ಲಿ ಕಲಾಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಸೆಪ್ಟೆಂಬರ್ 2023, 3:03 IST
Last Updated 19 ಸೆಪ್ಟೆಂಬರ್ 2023, 3:03 IST
ಸಂಸತ್‌ ಭವನದ ಹೊಸ ಕಟ್ಟಡ
ಸಂಸತ್‌ ಭವನದ ಹೊಸ ಕಟ್ಟಡ   

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದ ಕಲಾಪಗಳು ಇಂದಿನಿಂದ ಹೊಸ ಸಂಸತ್‌ ಕಟ್ಟಡದಲ್ಲಿ ನಡೆಯಲಿವೆ.

ನಿನ್ನೆಯಿಂದ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಿದೆ. ಒಟ್ಟು 5 ದಿನಗಳ ವಿಶೇಷ ಅಧಿವೇಶನ ನಡೆಯಲಿದ್ದು ಹಲವು ಮಸೂದೆಗಳು ಮಂಡನೆಯಾಗಲಿವೆ.

ಭಾರತದ 75 ವರ್ಷಗಳ ಪ್ರಜಾಪ್ರಭುತ್ವದ ಪಯಣದ ಬಗ್ಗೆ ನಿನ್ನೆ ಚರ್ಚೆಗಳು ನಡೆದವು. ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವರು ಮಾತನಾಡಿದರು.

ADVERTISEMENT

ಇಂದು ಮಧ್ಯಾಹ್ನ 1.15ಕ್ಕೆ ಲೋಕಸಭೆಯ ಕಲಾಪ ಆರಂಭವಾಗಲಿದೆ. ರಾಜ್ಯಸಭೆ ಕಲಾಪ ಮಧ್ಯಾಹ್ನ 2.15ಕ್ಕೆ ಶುರುವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.