
ಪ್ರಜಾವಾಣಿ ವಾರ್ತೆ
ನವದೆಹಲಿ: ಕರ್ನಾಟಕ ಸೇರಿದಂತೆ 22 ರಾಜ್ಯಗಳಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)ಏಪ್ರಿಲ್‌ನಿಂದ ಆರಂಭಗೊಳ್ಳುವ ನಿರೀಕ್ಷೆಯಿದೆ ಎಂದು ಕೇಂದ್ರ ಚುನಾವಣಾ ಆಯೋಗವು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ತಿಳಿಸಿದ್ದಾರೆ.
ಎಸ್‌ಐಆರ್‌ಗೆ ಸಂಬಂಧಿಸಿದಂತೆ ಪೂರ್ವ ಸಿದ್ಧತೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಚುನಾವಣಾ ಇಲಾಖೆಯ ಕಾರ್ಯದರ್ಶಿ ಪವನ್ ದಿವಾಣ್ ಅವರು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ದೇಶದಾದ್ಯಂತ ಎಸ್‌ಐಆರ್ ನಡೆಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗವು ಕಳೆದ ವರ್ಷ ಜೂನ್ 24ರಂದು ಘೋಷಿಸಿತ್ತು. 2025ರ ಜೂನ್‌ನಲ್ಲಿ ಬಿಹಾರದಲ್ಲಿ ಈ ಪ್ರಕ್ರಿಯೆ ನಡೆದಿರುವ ಕಾರಣ, ದೇಶದ ಉಳಿದ ರಾಜ್ಯಗಳಲ್ಲಿ ಪೂರ್ವ ಸಿದ್ಧತೆ ಚಟುವಟಿಕೆಗಳನ್ನು ಆರಂಭಿಸಬೇಕು ರಾಜ್ಯ ಚುನಾವಣಾ ಆಯೋಗದ ಸಿಇಒಗಳಿಗೆ ಸೂಚನೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.