
ಪಿಟಿಐ
ಚೆನ್ನೈ: ಮಧುರೈನಿಂದ ದುಬೈಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನವೊಂದು ತಾಂತ್ರಿಕ ಕಾರಣದಿಂದಾಗಿ ಚೆನ್ನೈನಲ್ಲಿ ಸೋಮವಾರ ಭೂಸ್ಪರ್ಶ ಮಾಡಿದೆ.
‘160 ಪ್ರಯಾಣಿಕರಿದ್ದ ವಿಮಾನದ ಹಾರಾಟದ ವೇಳೆ ತಾಂತ್ರಿಕ ದೋಷ ಪತ್ತೆಯಾಗಿದ್ದು, ಮಾರ್ಗ ಬದಲಾವಣೆ ಮಾಡಿ ಚೆನ್ನೈನಲ್ಲಿ ಇಳಿಸಲಾಗಿದೆ’ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.
‘ವಿಮಾನವು ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದೆ. ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ’ ಎಂದು ಸ್ಪೈಸ್‌ಜೆಟ್ ವಕ್ತಾರರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.