ADVERTISEMENT

ಸ್ಪೈಸ್‌ಜೆಟ್‌ ವಿಮಾನಕ್ಕೆ ಹಕ್ಕಿ ಡಿಕ್ಕಿ

ಪಿಟಿಐ
Published 9 ಮೇ 2022, 14:36 IST
Last Updated 9 ಮೇ 2022, 14:36 IST
–ಪ್ರಾತಿನಿಧಿಕ ಚಿತ್ರ
–ಪ್ರಾತಿನಿಧಿಕ ಚಿತ್ರ   

ನವದೆಹಲಿ: ಬೆಳಗಾವಿಯಿಂದ ದೆಹಲಿಗೆ ಹೊರಟಿದ್ದ ಸ್ಪೈಸ್‌ಜೆಟ್‌ ವಿಮಾನವೊಂದಕ್ಕೆ ಸೋಮವಾರ ಹಕ್ಕಿ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನವು ಬಳಿಕ ದೆಹಲಿಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಕೆಳಗಿಳಿದಿದೆ. ಇದರಲ್ಲಿ 187 ಮಂದಿ ಪ್ರಯಾಣಿಕರಿದ್ದರು ಎಂದು ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್‌ನ ಬೋಯಿಂಗ್‌ 737-8 ಮ್ಯಾಕ್ಸ್‌ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಭಾರತೀಯ ವಿಮಾನ ನಿಲ್ದಾಣಗಳ ‍ಪ್ರಾಧಿಕಾರದ (ಎಎಐ) ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.