ADVERTISEMENT

ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜುಗೆ ಕೋವಿಡ್ ಸೋಂಕು

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2021, 2:10 IST
Last Updated 18 ಏಪ್ರಿಲ್ 2021, 2:10 IST
ಕಿರಣ್ ರಿಜಿಜು (ಪಿಟಿಐ ಚಿತ್ರ)
ಕಿರಣ್ ರಿಜಿಜು (ಪಿಟಿಐ ಚಿತ್ರ)   

ನವದೆಹಲಿ: ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

‘ಹಲವು ಬಾರಿ ಪರೀಕ್ಷೆಗೆ ಒಳಗಾದ ಬಳಿಕ ನನ್ನ ಕೋವಿಡ್ ಪರೀಕ್ಷೆ ವರದಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ನಿಗಾ ವಹಿಸಿ, ಸ್ವಯಂ ಕ್ವಾರಂಟೈನ್ ಆಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ. ನಾನು ಚೆನ್ನಾಗಿದ್ದೇನೆ’ ಎಂದು ರಿಜಿಜು ಟ್ವೀಟ್ ಮಾಡಿದ್ದಾರೆ.

ರಿಜಿಜು ಅವರು ಉತ್ತರಾಖಂಡದ ತೆಹ್ರಿಯಲ್ಲಿ ಜಲ ಮತ್ತು ಸಾಹಸ ಕ್ರೀಡಾ ಸಂಸ್ಥೆಯೊಂದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಶುಕ್ರವಾರ ಭಾಗವಹಿಸಿದ್ದರು. ಇತ್ತೀಚೆಗಷ್ಟೇ ಸೋಂಕಿನಿಂದ ಚೇತರಿಸಿಕೊಂಡಿದ್ದ ಉತ್ತರಾಖಂಡ ಮುಖ್ಯಮಂತ್ರಿ ತೀರಥ್‌ ಸಿಂಗ್ ರಾವತ್ ಸಹ ರಿಜಿಜು ಜತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.