ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿಗೆ ಶ್ರೀಲಂಕಾದ ಪ್ರಧಾನಿ ಹರಿಣಿ ಅಮರಸೂರ್ಯ ಅವರು ಗುರುವಾರ ಭೇಟಿ ನೀಡಿದರು.
ಹಿಂದೂ ಕಾಲೇಜಿನ ಪ್ರಾಂಶುಪಾಲರಾದ ಅಂಜು ಶ್ರೀವಾಸ್ತವ ಅವರು ಹರಿಣಿ ಅವರನ್ನು ಸ್ವಾಗತಿಸಿದರು. ಬಳಿಕ ಅವರು ಕಾಲೇಜು ಆಡಳಿತ ಮಂಡಳಿ, ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ತಮ್ಮ ವಿದ್ಯಾರ್ಥಿ ಜೀವನವನ್ನು ಮೆಲುಕು ಹಾಕಿದರು.
ಹಿಂದೂ ಕಾಲೇಜಿನ ಹಳೆಯ ವಿದ್ಯಾರ್ಥಿಯಾದ ಹರಿಣಿ ಅವರು, 1991–1994ರ ಅವಧಿಯಲ್ಲಿ ಸಮಾಜಶಾಸ್ತ್ರ ವಿಭಾಗದಲ್ಲಿ ಸ್ನಾತಕ ಪದವಿ ತರಗತಿಯಲ್ಲಿ ವ್ಯಾಸಂಗ ಮಾಡಿದ್ದರು.
ಅಧಿಕಾರ ವಹಿಸಿಕೊಂಡ ಬಳಿಕ ಹರಿಣಿ ಅವರು ಇದೇ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದು, ಅಕ್ಟೋಬರ್ 16ರಿಂದ 18ರವರೆಗೆ ಭಾರತ ಪ್ರವಾಸದಲ್ಲಿ ಇರಲಿದ್ದಾರೆ.
ನವದೆಹಲಿಯ ಹಿಂದೂ ಕಾಲೇಜಿಗೆ ಶ್ರೀಲಂಕಾದ ಪ್ರಧಾನಿ ಹರಿಣಿ ಅಮರಸೂರ್ಯ ಗುರುವಾರ ಭೇಟಿ ನೀಡಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.