ನವದೆಹಲಿ : ಶುಕ್ರವಾರ ದೆಹಲಿಯ ತಮ್ಮ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ್ದ ಶ್ರೀಲಂಕಾ ಪ್ರಧಾನಿ ಹರಿಣಿ ಅಮರಸೂರ್ಯ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸುದೀರ್ಘ ಚರ್ಚೆ ನಡೆಸಿದರು.
ಉಭಯ ದೇಶಗಳ ನಡುವಿನ ಸಹಕಾರ ವೃದ್ಧಿ, ಶಿಕ್ಷಣ, ಮಹಿಳಾ ಸ್ವಾವಲಂಬನೆ, ಸಂಶೋಧನೆ ಮತ್ತು ಭಾರತೀಯ ಮೀನುಗಾರರ ಸುರಕ್ಷತೆಯ ವಿಚಾರಗಳೂ ಸೇರಿದಂತೆ ಹಲವು ಅಂಶಗಳ ಬಗ್ಗೆ ಚರ್ಚೆ ನಡೆಯಿತು ಎಂದು ಮೋದಿ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.
‘ನಾಗರಿಕರ ಸಮೃದ್ಧಿಯ ಆಶೋತ್ತರ ಈಡೇರಿಸುವುದು ಮತ್ತು ಪ್ರಾದೇಶಿಕ ಸಹಕಾರಕ್ಕೆ ಮತ್ತಷ್ಟು ಮಹತ್ವ ನೀಡುವುದು ಎರಡೂ ಆತ್ಮೀಯ ನೆರೆಯ ದೇಶಗಳ ಮಹತ್ವದ ಉದ್ದೇಶವಾಗಿದೆ’ ಎಂದು ಮೋದಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.