ADVERTISEMENT

ಶಿಕ್ಷಕಿ ಸಾವು: ಕಣಿವೆ ರಾಜ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2019, 19:13 IST
Last Updated 20 ಮಾರ್ಚ್ 2019, 19:13 IST

ಶ್ರೀನಗರ: ಉಗ್ರರ ಜತೆ ಸಂಪರ್ಕ ಹೊಂದಿದ ಆರೋಪದಲ್ಲಿ, ಪೊಲೀಸ್‌ ವಶದಲ್ಲಿದ್ದ ಖಾಸಗಿ ಶಾಲಾ ಶಿಕ್ಷಕಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಬುಧವಾರವೂ ವ್ಯಾಪಕ ಪ್ರತಿಭಟನೆ ನಡೆದಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪ್ರತ್ಯೇಕತಾವಾದಿ ನಾಯಕ ಸಯ್ಯದ್‌ ಅಲಿ ಗಿಲಾನಿ, ಮಿರ್‌ವಿಜ್‌ ಉಮರ್ ಫಾರೂಕ್‌ ಹಾಗೂ ಯಾಸಿನ್ ಮಲಿಕ್‌ ನೇತೃತ್ವದಲ್ಲಿ ಬಂದ್‌ಗೆ ಕರೆ ನೀಡಲಾಗಿತ್ತು.

ಬಂದ್‌ನಿಂದಾಗಿ ಅಂಗಡಿ ಮುಂಗಟ್ಟು ಹಾಗೂ ವಾಣಿಜ್ಯ ಸಂಕೀರ್ಣಗಳು ಮುಚ್ಚಿದ್ದವು. ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಬಹುಮುಖ್ಯ ಮಾರುಕಟ್ಟೆ ಪ್ರದೇಶವಾದ ಲಾಲ್ ಚೌಕ್‌ ಬಂದ್‌ ಆಗಿತ್ತು. ಪ್ರತಿಭಟನೆಯಲ್ಲಿ ಸರ್ಕಾರಿ ನೌಕರರೂ ಭಾಗವಹಿಸಿದ್ದರು. ಆದರೆ, ಸಾರಿಗೆ ವ್ಯವಸ್ಥೆ ಎಂದಿನಂತೆ ಇತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.