ADVERTISEMENT

ಲತೀಫ್‌ ಟೈಗರ್‌ ಸೇರಿ ಮೂವರು ಉಗ್ರರ ಹತ್ಯೆ

​ಪ್ರಜಾವಾಣಿ ವಾರ್ತೆ
Published 3 ಮೇ 2019, 19:25 IST
Last Updated 3 ಮೇ 2019, 19:25 IST

ಶ್ರೀನಗರ: ಭದ್ರತಾ ಪಡೆಗಳ ಜತೆ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರ ಬುರ್ಹಾನ್‌ ವಾನಿ ಸಹಚರರಾದ ಲತೀಫ್‌ ದಾರ್‌ ಅಲಿಯಾಸ್‌ ಲತೀಫ್‌ ಟೈಗರ್‌ಸೇರಿದಂತೆ ಮೂವರು ಉಗ್ರರು ಹತ್ಯೆಗೀಡಾಗಿದ್ದಾರೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಅಡ್ಕರಾ ಗ್ರಾಮದಲ್ಲಿ ಈ ಎನ್‌ಕೌಂಟರ್ ನಡೆದಿದೆ. ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ವಿಶೇಷ ಪಡೆ ಕಾರ್ಯಾಚರಣೆ ಕೈಗೊಂಡಿತ್ತು.

ಉಳಿದ ಇಬ್ಬರು ಉಗ್ರರನ್ನು ತಾರೀಕ್‌ ಮೌಲ್ವಿ ಮತ್ತು ಶಾರಿಕ್‌ ನೆಗ್ರೂ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹಿಜ್ಬುಲ್‌ ಮುಜಾಹಿದ್ದೀನ್‌ ಸಂಘಟನೆ ಜತೆ ಗುರುತಿಸಿಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

2016ರ ಜುಲೈನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ವಾನಿ ಹತ್ಯೆಗೀಡಾಗಿದ್ದ. ವಾನಿ ಜತೆಗಿದ್ದ ಲತೀಫ್‌ ಟೈಗರ್‌ 2014ರಿಂದ ಉಗ್ರಗಾಮಿ ಚಟುವಟಿಕೆಗಳಲ್ಲಿ ತೊಡಗಿದ್ದ.

2018ರಲ್ಲಿ 272 ಉಗ್ರರು ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದರು. ಈ ವರ್ಷ ಇದುವರೆಗೆ 74 ಉಗ್ರರು ಹತ್ಯೆಗೀಡಾಗಿದ್ದಾರೆ. ಪುಲ್ವಾಮಾ ದಾಳಿ ಬಳಿಕ 42 ಉಗ್ರರು ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.