ADVERTISEMENT

ಶ್ರೀನಗರದಲ್ಲಿ ತಾಪಮಾನ ಮೈನಸ್‌ 2.2 ಡಿಗ್ರಿ ಸೆಲ್ಸಿಯಸ್‌ಗೆ ಕುಸಿತ

ಪಿಟಿಐ
Published 29 ನವೆಂಬರ್ 2022, 12:42 IST
Last Updated 29 ನವೆಂಬರ್ 2022, 12:42 IST
ಶ್ರೀನಗರ
ಶ್ರೀನಗರ   

ಶ್ರೀನಗರ: ಶ್ರೀನಗರದಲ್ಲಿ ಸೋಮವಾರ ರಾತ್ರಿ ಮೈನಸ್‌ 2.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು, ಇದು ಈ ಚಳಿಗಾಲದಲ್ಲಿ ಇಲ್ಲಿ ದಾಖಲಾಗಿರುವ ಅತ್ಯಂತ ಕಡಿಮೆ ತಾಪಮಾನ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ರಾತ್ರಿ ಮೈನಸ್ 1.8 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು ಎಂದೂ ಹೇಳಿದ್ದಾರೆ.

ಉತ್ತರ ಕಾಶ್ಮೀರದ ಗುಲ್‌ಮಾರ್ಗ್‌ನಲ್ಲಿ ಮೈನಸ್‌1.5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಮುಂದಿನ ಐದು ದಿನಗಳ ಕಾಲ ಇಲ್ಲಿ ಕನಿಷ್ಠ ತಾಪಮಾನವು ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ ಎಂದೂ ವಿವರಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.