ADVERTISEMENT

ಕಿರುಕುಳ, ಲಿಂಗ ತಾರತಮ್ಯ ದೂರು: 10 ದಿನ ಸಮಯ ಕೇಳಿದ ಶ್ರೀನಿವಾಸ್‌

ಪಿಟಿಐ
Published 2 ಮೇ 2023, 21:13 IST
Last Updated 2 ಮೇ 2023, 21:13 IST
ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ್‌ ಬಿ.ವಿ
ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶ್ರೀನಿವಾಸ್‌ ಬಿ.ವಿ    ಪಿಟಿಐ

ಗುವಾಹಟಿ: ಅಸ್ಸಾಂ ರಾಜ್ಯ ಯುವ ಕಾಂಗ್ರೆಸ್ ನಾಯಕರಾಗಿದ್ದ ಅಂಕಿತಾ ದತ್ತಾ ಅವರು ನೀಡಿದ ಕಿರುಕುಳ ಮತ್ತು ಲಿಂಗ ತಾರತಮ್ಯ ದೂರಿಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹಾಜರಾಗುವುದಕ್ಕೆ 10 ದಿನಗಳ ಕಾಲಾವಕಾಶ ನೀಡಬೇಕು ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಅವರು ಅಸ್ಸಾಂ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಶ್ರೀನಿವಾಸ್‌ ಅವರ ಪ್ರತಿನಿಧಿ ದಿಸ್ಪುರ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಹೆಚ್ಚಿನ ಕಾಲಾವಕಾಶ ಕೋರಿ ಮನವಿ ಸಲ್ಲಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಈ ಮಧ್ಯೆ, ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಶ್ರೀನಿವಾಸ್‌ ಸಲ್ಲಿಸಿದ್ದ ಮನವಿ ಅರ್ಜಿಯ ಮುಂದಿನ ವಿಚಾರಣೆಯನ್ನು ಗೌಹಾಟಿ ಹೈಕೋರ್ಟ್ ಗುರುವಾರ ನಡೆಸಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.