ADVERTISEMENT

ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ ರಸ್ತೆ ಅಭಿವೃದ್ಧಿ: ಕೇಂದ್ರ ಭರವಸೆ

ಭಾರತಮಾಲ-2 ಯೋಜನೆಯಡಿ ಅಭಿವೃದ್ಧಿ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2022, 14:13 IST
Last Updated 20 ಏಪ್ರಿಲ್ 2022, 14:13 IST
ನಾರಾಯಣ ಗೌಡ, ರೇಷ್ಮೆ ಸಚಿವ
ನಾರಾಯಣ ಗೌಡ, ರೇಷ್ಮೆ ಸಚಿವ   
ನವದೆಹಲಿ: ಶ್ರೀರಂಗಪಟ್ಟಣ ಮತ್ತು ಚನ್ನರಾಯಪಟ್ಟಣ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಭರವಸೆ ನೀಡಿದ್ದಾರೆ ಎಂದು ರೇಷ್ಮೆ ಸಚಿವ ನಾರಾಯಣ ಗೌಡ ಅವರು ಹೇಳಿದ್ದಾರೆ.

ಈ ಯೋಜನೆಯನ್ನು ಭಾರತಮಾಲ-2 ಯೋಜನೆಯಡಿ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ಕೇಂದ್ರ ಸಚಿವ ಗಡ್ಕರಿ ಅವರನ್ನು ಭೇಟಿ ಮಾಡಿದ ನಾರಾಯಣ ಗೌಡ ಅವರು, ಮಂಡ್ಯ ಜಿಲ್ಲೆಯಲ್ಲಿ ಕೈಗೊಳ್ಳಬೇಕಿರುವ ಹೆದ್ದಾರಿ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದರು.

ಶಿವಮೊಗ್ಗ ಮತ್ತು ಮೈಸೂರು ನಗರಗಳಿಗೆ ಸಂಪರ್ಕ ಕಲ್ಪಿಸುವ ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ-ಅರಸೀಕೆರೆ ರಸ್ತೆಯನ್ನು ನಿತ್ಯ ಸಾವಿರಾರು ಜನ ಬಳಸುತ್ತಿದ್ದಾರೆ. ಈ ರಸ್ತೆಯನ್ನು ಮೇಲ್ದರ್ಜೆಗೇರಿಸುವುದರಿಂದ ಸಾವಿರಾರು ಜನರ ಸಂಚಾರ ಸುಗಮವಾಗಲಿದೆ ಎಂದು ಸಚಿವ ನಾರಾಯಣ ಗೌಡ ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.