ADVERTISEMENT

Maha Kumbh Stampede: ನ್ಯಾಯಾಂಗ ತನಿಖೆಗೆ ಆದೇಶಿಸಿದ ಯೋಗಿ ಆದಿತ್ಯನಾಥ

​ಪ್ರಜಾವಾಣಿ ವಾರ್ತೆ
Published 29 ಜನವರಿ 2025, 16:23 IST
Last Updated 29 ಜನವರಿ 2025, 16:23 IST
<div class="paragraphs"><p>ಸಿಎಂ ಯೋಗಿ ಆದಿತ್ಯನಾಥ</p></div>

ಸಿಎಂ ಯೋಗಿ ಆದಿತ್ಯನಾಥ

   

ಲಖನೌ: ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ನ್ಯಾಯಾಂಗ ತನಿಖೆಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಬುಧವಾರ ಆದೇಶಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರದಿಂದ ತಲಾ ₹25 ಲಕ್ಷ ಪರಿಹಾರವನ್ನೂ ಘೋಷಿಸಿದ್ದಾರೆ. 

ಮಹಾಕುಂಭ ಮೇಳದಲ್ಲಿ ಸಂಭವಿಸಿದ ದುರಂತದ ಕಾರಣಗಳ ಬಗ್ಗೆ ಮೂವರು ಸದಸ್ಯರ ಸಮಿತಿಯು ತನಿಖೆ ನಡೆಸಲಿದೆ.

ADVERTISEMENT

ದುರಂತದಿಂದ ಭಾವುಕಗೊಂಡಿರುವ ಯೋಗಿ ಆದಿತ್ಯನಾಥ ಅವರು ‘ಈ ಘಟನೆ ದುರದೃಷ್ಟಕರ. ಮನಸ್ಸನ್ನು ಘಾಸಿಗೊಳಿಸಿದೆ. ಇದು ನಮಗೆ ಒಂದು ಪಾಠ. ನಾವು ಏನೆಲ್ಲಾ ಸಾಧ್ಯವಿತ್ತೋ ಆ ಎಲ್ಲ ವ್ಯವಸ್ಥೆಗಳನ್ನು ಮಾಡಿದ್ದೆವು. ನಾವು ಮೇಳದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ’ ಎಂದು ಹೇಳಿದ್ದಾರೆ. 

ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಮೇಳ ಅಧಿಕಾರಿಗಳೊಂದಿಗೆ ಚರ್ಚಿಸಲು ರಾಜ್ಯದ ಮುಖ್ಯ ಕಾರ್ಯದರ್ಶಿ ಮನೋಜ್ ಕುಮಾರ್ ಸಿಂಗ್ ಮತ್ತು ಪೊಲೀಸ್ ಮುಖ್ಯಸ್ಥ ಪ್ರಶಾಂತ್ ಕುಮಾರ್ ಅವರು ಪ್ರಯಾಗ್‌ರಾಜ್‌ಗೆ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.