ADVERTISEMENT

ದೆಹಲಿ ಕಾಲ್ತುಳಿತ: ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಪಿಟಿಐ
Published 16 ಫೆಬ್ರುವರಿ 2025, 9:24 IST
Last Updated 16 ಫೆಬ್ರುವರಿ 2025, 9:24 IST
<div class="paragraphs"><p>ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಮತ್ತು ಕಾಂಗ್ರೆಸ್‌</p></div>

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಮತ್ತು ಕಾಂಗ್ರೆಸ್‌

   

ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್‌ ಆಗ್ರಹಿಸಿದೆ.

ಈ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನಾಟೆ, ‘ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ದುರಂತದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಒಂದು ವೇಳೆ ಅವರು ರಾಜೀನಾಮೆ ನೀಡದಿದ್ದರೆ, ರೈಲ್ವೆ ನಿಲ್ದಾಣದಲ್ಲಿನ ಅವ್ಯವಸ್ಥೆಗಾಗಿ ಅವರನ್ನು ವಜಾಗೊಳಿಸಬೇಕು’ ಎಂದು ಹೇಳಿದ್ದಾರೆ.

ADVERTISEMENT

‘ರೈಲ್ವೆ ನಿಲ್ದಾಣಕ್ಕೆ ಎಷ್ಟು ಜನರು ಬರುತ್ತಿದ್ದಾರೆಂದು ರೈಲ್ವೆ ಅಧಿಕಾರಿಗಳಿಗೆ ಚೆನ್ನಾಗಿ ತಿಳಿದಿತ್ತು. ಪ್ರತಿ ಗಂಟೆಗೆ 1,500 ಟಿಕೆಟ್‌ಗಳು ಮಾರಾಟವಾಗುತ್ತಿವೆ ಎಂದು ಅವರು ಹೇಳಿದ್ದರು. ಹೀಗಿರುವಾಗ ಜನಸಂದಣಿಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಲು ಸರಿಯಾದ ವ್ಯವಸ್ಥೆಗಳನ್ನು ಮಾಡಬೇಕಿತ್ತು’ ಎಂದು ವಾಗ್ದಾಳಿ ನಡೆಸಿದ್ದಾರೆ.

ರೈಲ್ವೆ ಸಚಿವರು ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಸಚಿವ ಸ್ಥಾನದ ಕುರ್ಚಿಯಲ್ಲಿ ಒಂದು ನಿಮಿಷವೂ ಇರಲು ಅವರು ಅರ್ಹರಲ್ಲ. ಆದರೂ ನಾಚಿಕೆಯಿಲ್ಲದೆ ಆ ಸ್ಥಾನದಲ್ಲಿದ್ದಾರೆ. ಇಂತವರ ಕೈಗೆ ಭಾರತೀಯ ರೈಲ್ವೆಯನ್ನು ನೀಡುವುದು ಸರಿಯಲ್ಲ. ರೈಲ್ವೆ ಸಚಿವರು ಜನರ ಸಾವನ್ನು ಸಣ್ಣ ಘಟನೆಗಳೆಂದು ಬಣ್ಣಿಸುವ ವ್ಯಕ್ತಿಯಾಗಿರಬಾರದು. ಜನರಿಗೆ ಸಂತಾಪ ಸೂಚಿಸುವ ಬದಲು ಜನರ ಸಾವುಗಳನ್ನು ಮರೆಮಾಚಲು ಪ್ರಯತ್ನಿಸಬಾರದು ಎಂದು ಅವರು ಹೇಳಿದ್ದಾರೆ.

ದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಕಾಲ್ತುಳಿತ ಅವಘಡದಲ್ಲಿ 18 ಮಂದಿ ಮೃತಪಟ್ಟಿದ್ದು, ಹಲವು ಜನರು ಗಾಯಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.