ADVERTISEMENT

ಮಳೆಗಾಲದ ಅಧಿವೇಶನ ನಿಗದಿತ ವೇಳೆಗೆ ಆರಂಭ: ಸ್ಪೀಕರ್‌

​ಪ್ರಜಾವಾಣಿ ವಾರ್ತೆ
Published 10 ಮೇ 2020, 13:16 IST
Last Updated 10 ಮೇ 2020, 13:16 IST
ಸ್ಪೀಕರ್ ಓಂ ಬಿರ್ಲಾ
ಸ್ಪೀಕರ್ ಓಂ ಬಿರ್ಲಾ   

ನವದೆಹಲಿ(ಪಿಟಿಐ): ಸಂಸತ್‌ನ ಮಳೆಗಾಲದ ಅಧಿವೇಶನ ನಿಗದಿತ ವೇಳೆಗೆ ಆರಂಭಗೊಳ್ಳಲಿದೆ ಎಂದು ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಭಾನುವಾರ ಹೇಳಿದ್ದಾರೆ.

ಸಾಮಾನ್ಯವಾಗಿ ಮಳೆಗಾಲದ ಅಧಿವೇಶನ ಜೂನ್‌ ಕೊನೆಯ ವಾರದಲ್ಲಿ ಅಥವಾ ಜುಲೈ ಮೊದಲ ವಾರದಲ್ಲಿ ಆರಂಭವಾಗುತ್ತದೆ.

ಕೋವಿಡ್‌ 19ರ ಪರಿಣಾಮ ಉಂಟಾಗಿರುವ ಬಿಕ್ಕಟ್ಟಿನ ನಡುವೆಯೂ ನಿಗದಿತ ಸಮಯಕ್ಕೆ ಸರಿಯಾಗಿ ಅಧಿವೇಶನ ಆರಂಭವಾಗುವ ವಿಶ್ವಾಸವನ್ನು ಸ್ಪೀಕರ್‌ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.