ADVERTISEMENT

ಕೋವಿಡ್‌ ಲಸಿಕೆ: ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 1.57 ಕೋಟಿ ಡೋಸ್‌ ಲಭ್ಯ

ಪಿಟಿಐ
Published 1 ಜೂನ್ 2021, 6:47 IST
Last Updated 1 ಜೂನ್ 2021, 6:47 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್‌ ಲಸಿಕೆಯ 1.57 ಕೋಟಿಗೂ ಹೆಚ್ಚು ಡೋಸ್‌ಗಳು ಈಗ ಲಭ್ಯವಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಕೇಂದ್ರವು ಇಲ್ಲಿಯವರೆಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 23 ಕೋಟಿಗೂ ಹೆಚ್ಚು ಡೋಸ್‌ಗಳನ್ನು ವಿತರಿಸಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಲಸಿಕೆಗಳನ್ನು ನೀಡುತ್ತಿದೆ. ಅಲ್ಲದೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಲಸಿಕೆಗಳನ್ನು ನೇರವಾಗಿ ಖರೀದಿಸಲೂ ಸಹಕರಿಸುತ್ತಿದೆ ಎಂದು ಸಚಿವಾಲಯ ಹೇಳಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.