ADVERTISEMENT

ಮೂರು ದಿನಗಳಲ್ಲಿ ರಾಜ್ಯಗಳಿಗೆ 9 ಲಕ್ಷ ಡೋಸ್ ಲಸಿಕೆ ಪೂರೈಕೆ: ಕೇಂದ್ರ ಸರ್ಕಾರ

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

ಪಿಟಿಐ
Published 10 ಮೇ 2021, 6:56 IST
Last Updated 10 ಮೇ 2021, 6:56 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದು ಕೋಟಿ ಡೋಸ್‌ಗಳಷ್ಟು ‘ಕೋವಿಡ್‌ 19‘ ಲಸಿಕೆ ದಾಸ್ತಾನಿದ್ದು, ಮುಂದಿನ ಮೂರು ದಿನಗಳಲ್ಲಿ ಇನ್ನೂ 9 ಲಕ್ಷ ಡೋಸ್‌ಗಳಷ್ಟು ಲಸಿಕೆಯನ್ನು ಹೆಚ್ಚುವರಿಯಾಗಿ ಪೂರೈಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಕೇಂದ್ರವು ಈವರೆಗೆ ಸುಮಾರು 18 ಕೋಟಿ ಡೋಸ್‌ಗಳಷ್ಟು ಲಸಿಕೆಯನ್ನು (17,93,57,860) ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ನೀಡಿದೆ. ಇದರಲ್ಲಿ ವ್ಯರ್ಥವಾಗಿರುವ ಲಸಿಕೆಗಳು ಸೇರಿ, ಒಟ್ಟು 16,89,27,797 ಡೋಸ್‌ಗಳಷ್ಟು ಲಸಿಕೆ ಬಳಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT