
ಮುಂಬೈ: ಸಾವರ್ಕರ್ ಅವರಿಗೆ ಭಾರತ ರತ್ನ ನೀಡಿದರೆ ಅದರ (ಪ್ರಶಸ್ತಿ) ಘನತೆ ಮತ್ತಷ್ಟು ಹೆಚ್ಚಾಗುತ್ತದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಹೇಳಿದ್ದಾರೆ.
ಆರ್‌ಎಸ್‌ಎಸ್‌ನ ಶತಮಾನೋತ್ಸವದ ಆಚರಣೆ ಹಿನ್ನೆಲೆ ಮುಂಬೈನಲ್ಲಿ ಆಯೋಜಿಸಲಾದ ಎರಡು ದಿನಗಳ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವತ್ ಈ ಹೇಳಿಕೆ ನೀಡಿದ್ದಾರೆ.
ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಆ ಸಮಿತಿಯ ಭಾಗವಾಗಿಲ್ಲ. ಅವಕಾಶ ಬಂದಾಗ, ನಾನು ಖಂಡಿತವಾಗಿಯೂ ಕೇಳುತ್ತೇನೆ ಎಂದಿದ್ದಾರೆ.
ಬಹಳ ಸಮಯದಿಂದ, ಹಲವು ಸಂಸ್ಥೆಗಳು, ಪ್ರಮುಖ ನಾಯಕರು ಮತ್ತು ರಾಜಕೀಯ ಪಕ್ಷಗಳು ಹಿಂದುತ್ವ ಸಿದ್ಧಾಂತ ಪ್ರತಿಪಾದಕ ವಿನಾಯಕ ದಾಮೋದರ್ ಸಾವರ್ಕರ್ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಬೇಕೆಂದು ಆಗ್ರಹಿಸುತ್ತಿವೆ ಎಂದೂ ಹೇಳಿದ್ದಾರೆ.
ಸಾವರ್ಕರ್ ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರಿಗ ಭಾರತ ರತ್ನವನ್ನು ನೀಡಿದರೆ ಪ್ರಶಸ್ತಿಯ ಘನತೆ ಮತ್ತಷ್ಟು ಹೆಚ್ಚಾಗುತ್ತದೆ ಎಂದೂ ಅವರು ಪ್ರತಿಪಾದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.