

ಉಕ್ಕು ಕಾರ್ಖಾನೆಯಲ್ಲಿ ಸ್ಫೋಟ
ಬಲೋದಾಬಜಾರ್: ಇಲ್ಲಿನ ಉಕ್ಕು ಕಾರ್ಖಾನೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಠ 7 ಕಾರ್ಮಿಕರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.
ಗ್ರಾಮೀಣ ಪ್ರದೇಶವಾದ ಬಕುಲಾಹಿ ಹಳ್ಳಿಯಲ್ಲಿರುವ ಸ್ಪಾಂಜ್ ಉಕ್ಕಿನ ಕಾರ್ಖಾನೆಯಲ್ಲಿ ಗುರುವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ. ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ 7 ಕಾರ್ಮಿಕರು ಮೃತಪಟ್ಟಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಕೆಲ ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆ ಮುಂದುವರೆದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.