ADVERTISEMENT

ಮುಸ್ಲಿಮರ ಮೇಲೆ ಮಲತಾಯಿ ಧೋರಣೆ: ಬಿಎಸ್‌ಪಿ ನಾಯಕಿ ಮಾಯಾವತಿ ಆರೋಪ

ಪಿಟಿಐ
Published 4 ಮಾರ್ಚ್ 2025, 5:45 IST
Last Updated 4 ಮಾರ್ಚ್ 2025, 5:45 IST
ಬಿಎಸ್‌ಪಿ ನಾಯಕಿ ಮಾಯಾವತಿ
ಬಿಎಸ್‌ಪಿ ನಾಯಕಿ ಮಾಯಾವತಿ   

ಲಖನೌ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲಾ ಧರ್ಮಗಳನ್ನು ಸಮಾನವಾಗಿ ಪರಿಗಣಿಸಬೇಕು. ಆದರೆ ಮುಸ್ಲಿಮರ ಮೇಲೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು  ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ನಾಯಕಿ ಮಾಯಾವತಿ ಮಂಗಳವಾರ ಆರೋಪಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ' ಇಂತಹ ತಾರತಮ್ಯವು ಸಮಾಜದಲ್ಲಿ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ತರಬಹುದು. ಇದು ಬಹಳ ಕಳವಳಕಾರಿ ವಿಷಯ' ಎಂದಿದ್ದಾರೆ.

'ಭಾರತವು ಎಲ್ಲಾ ಧರ್ಮಗಳನ್ನು ಗೌರವಿಸುವ ಜಾತ್ಯತೀತ ದೇಶ. ಹೀಗಿರುವಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾವುದೇ ಪಕ್ಷಪಾತವಿಲ್ಲದೆ ಎಲ್ಲ ಧರ್ಮದವರನ್ನು ಸಮಾನವಾಗಿ ಕಾಣಬೇಕು. ಆದರೆ ಧಾರ್ಮಿಕ ವಿಚಾರಗಳಲ್ಲಿ ಮುಸ್ಲಿಮರ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ' ಎಂದು ಹೇಳಿದ್ದಾರೆ.

ADVERTISEMENT

'ಎಲ್ಲಾ ಧರ್ಮಗಳ ಹಬ್ಬಗಳ ಆಚರಣೆಗೆ ಸಂಬಂಧಿಸಿದಂತೆ ನಿಯಮಗಳು ಮತ್ತು ನಿಬಂಧನೆಗಳನ್ನು ಯಾವುದೇ ತಾರತಮ್ಯವಿಲ್ಲದೆ ಸಮಾನವಾಗಿ ಜಾರಿಗೊಳಿಸಬೇಕು. ಆದರೆ ಅದು ಹಾಗೆ ನಡೆಯುತ್ತಿಲ್ಲ. ಇದರಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ಹದಗೆಡುವುದು ಸಹಜ. ಇದು ಅತ್ಯಂತ ಆತಂಕಕಾರಿ. ಹಾಗಾಗಿ ಸರ್ಕಾರಗಳು ಇದರ ಬಗ್ಗೆ ಗಮನ ಹರಿಸಬೇಕು' ಎಂದು ಅವರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.