ADVERTISEMENT

ಕೋವಿಡ್‌: ಪಶ್ಚಿಮ ಬಂಗಾಳದಲ್ಲಿ ಹೆಚ್ಚಳ– ಕ್ರಮಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2021, 16:38 IST
Last Updated 26 ಅಕ್ಟೋಬರ್ 2021, 16:38 IST
ಕೊರೋನಾ ವೈರಸ್
ಕೊರೋನಾ ವೈರಸ್   

ನವದೆಹಲಿ: ರಾಜ್ಯದಲ್ಲಿ ಕೋವಿಡ್‌–19 ಪ್ರಕರಣಗಳು ಹಾಗೂ ಕೋವಿಡ್‌ನಿಂದಾಗಿ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಕಾರಣ, ಕೂಡಲೇ ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ.

ಅದರಲ್ಲೂ, ಮುಂಬರುವ ಹಬ್ಬಗಳ ವೇಳೆ ಕೋವಿಡ್ ಮಾರ್ಗಸೂಚಿಗಳು ಪಾಲನೆಯಾಗುವುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಪಶ್ಚಿಮ ಬಂಗಾಳ ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಸೂಚಿಸಿದ್ದಾರೆ.

ಅಧ್ಯಯನ: ‘ಕೊರೊನಾ ವೈರಸ್ ಡೆಲ್ಟಾದ ಉಪತಳಿ ಎವೈ.4.2 ನ ತೀವ್ರತೆ ಕುರಿತು ತಜ್ಞರ ತಂಡ ಅಧ್ಯಯನ ನಡೆಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯಾ ಮಂಗಳವಾರ ಹೇಳಿದ್ದಾರೆ.

ADVERTISEMENT

ಈ ತಳಿಯ ಸೋಂಕಿನ ಪ್ರಕರಣಗಳು ಬ್ರಿಟನ್‌ನಲ್ಲಿ ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.