ADVERTISEMENT

2 ತಿಂಗಳಲ್ಲಿ ಇದು ಮೂರನೇ ಬಾರಿ;ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಕಲ್ಲು ತೂರಾಟ

ಪಿಟಿಐ
Published 20 ಫೆಬ್ರುವರಿ 2019, 12:28 IST
Last Updated 20 ಫೆಬ್ರುವರಿ 2019, 12:28 IST
   

ನವದೆಹಲಿ: ಭಾರತದ ಅತಿ ವೇಗದ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಬುಧವಾರ ಕಲ್ಲು ತೂರಾಟ ನಡೆದಿದ್ದು, ಗಾಜಿನ ಕಿಟಕಿಗಳಿಗೆ ಹಾನಿಯಾಗಿದೆ ಎಂದು ರೈಲ್ವೆ ಹೇಳಿದೆ.

ತುಂಡ್ಲಾ ಜಂಕ್ಷನ್ ದಾಟುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಉತ್ತರ ರೈಲ್ವೆ ವಕ್ತಾರ ದೀಪಕ್ ಕುಮಾರ್ ಹೇಳಿದ್ದಾರೆ.

ಫೆಬ್ರುವರಿ 17ರಂದು ವಂದೇ ಭಾರತ್ ಎಕ್ಸ್‌ಪ್ರೆಸ್‌ ಸಂಚಾರ ಆರಂಭಿಸಿತ್ತು.

ADVERTISEMENT

ಕಳೆದ ವರ್ಷ ಡಿಸೆಂಬರ್‌ನಲ್ಲಿ ದೆಹಲಿ- ಆಗ್ರಾ ನಡುವೆ ಪರೀಕ್ಷಾ ಸಂಚಾರ ನಡೆಸುತ್ತಿದ್ದ ವೇಳೆ ಕಲ್ಲು ತೂರಾಟ ನಡೆದಿತ್ತು. ಇದಾದ ನಂತರ ಫೆಬ್ರುವರಿ 2ರಂದು ಇಂಥದ್ದೇ ಕೃತ್ಯ ಪುನರಾವರ್ತನೆಯಾಗಿದ್ದು, ಎರಡು ತಿಂಗಳಲ್ಲಿ ಮೂರನೇ ಬಾರಿ ಈ ರೈಲು ಮೇಲೆ ಕಲ್ಲು ತೂರಾಟ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.