ADVERTISEMENT

ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಮತ್ತೆ ಎರಡು ಗುಂಪುಗಳ ಮಧ್ಯೆ ಕಲ್ಲು ತೂರಾಟ

​ಪ್ರಜಾವಾಣಿ ವಾರ್ತೆ
Published 8 ಜೂನ್ 2022, 5:08 IST
Last Updated 8 ಜೂನ್ 2022, 5:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಮತ್ತೆ ಎರಡು ಗುಂಪುಗಳ ನಡುವೆ ಮಂಗಳವಾರ ರಾತ್ರಿ ಕಲ್ಲು ತೂರಾಟ ನಡೆದಿದೆ.

ಈಗಾಗಲೇ ಕೋಮು ಸಂಘರ್ಷದಿಂದಾಗಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿರುವುದು ಮತ್ತಷ್ಟು ಭೀತಿಯ ವಾತಾವರಣವನ್ನು ಸೃಷ್ಟಿಸಿದೆ.

ಎರಡು ಗುಂಪುಗಳ ನಡುವೆ ವಾಗ್ವಾದ ಉಂಟಾಗಿ ಕಲ್ಲು ತೂರಾಟ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಸುದ್ದಿ ಸಂಸ್ಥೆ ಎಎನ್‌ಐ, ಕಲ್ಲು ತೂರಾಟಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಯನ್ನು ಟ್ಟೀಟ್ ಮಾಡಿದ್ದು, ಘಟನೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದೆ.

ಘಟನೆಯಲ್ಲಿ ಹಲವಾರು ವಾಹನಗಳು ಜಖಂಗೊಂಡಿದ್ದು, ಯಾವುದೇ ಅಹಿತಕರ ಘಟನೆಯನ್ನು ಮಟ್ಟ ಹಾಕಲು ಹೆಚ್ಚು ಪೊಲೀಸ್ ತಂಡವನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ಜಹಾಂಗೀರ್‌ಪುರಿಯಲ್ಲಿ ಹನುಮ ಜಯಂತಿ ಹಾಗೂ ರಾಮ ನವಮಿ ವೇಳೆ ಕೋಮು ಗಲಭೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.