ADVERTISEMENT

ರಾಜಸ್ಥಾನದ ಜೋಧಪುರದಲ್ಲಿ ಕಲ್ಲು ತೂರಾಟ; ಶಾಂತಿ ಕಾಪಾಡಲು ಸಿಎಂ ಗೆಹಲೋತ್ ಕರೆ

ಪಿಟಿಐ
Published 3 ಮೇ 2022, 7:30 IST
Last Updated 3 ಮೇ 2022, 7:30 IST
ಟ್ವಿಟರ್ ವಿಡಿಯೊ ಸ್ಕ್ರೀನ್ ಗ್ರ್ಯಾಬ್
ಟ್ವಿಟರ್ ವಿಡಿಯೊ ಸ್ಕ್ರೀನ್ ಗ್ರ್ಯಾಬ್   

ಜೋಧಪುರ: ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರ ತವರೂರು ಜೋಧಪುರದ ಜಲೋರಿ ಗೇಟ್ ಪ್ರದೇಶದಲ್ಲಿ ಕೋಮು ಉದ್ವಿಗ್ನತೆ ಉಂಟಾಗಿದ್ದು, ಮಂಗಳವಾರ ಮುಂಜಾನೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಕನಿಷ್ಠ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ.

ಈದ್‌ ಆಚರಣೆಗೆ ಕೆಲ ಗಂಟೆಗಳ ಮೊದಲು ಈ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಜನರಿಗೆ ಮನವಿ ಮಾಡಿದ್ದಾರೆ.

ಈದ್ ಸಂದರ್ಭದಲ್ಲಿ ಧಾರ್ಮಿಕ ಧ್ವಜ ಅಳವಡಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಕಲ್ಲು ತೂರಾಟದಲ್ಲಿ ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರದೇಶದಲ್ಲಿ ಭಾರೀ ಪೊಲೀಸ್ ಭದ್ರತೆ ಹೆಚ್ಚಿಸಗಿದೆ’ಎಂದು ಪೊಲೀಸ್ ನಿಯಂತ್ರಣ ಕೊಠಡಿಯ ಮೂಲಗಳು ತಿಳಿಸಿವೆ.

ಈ ಘಟನೆ ದುರದೃಷ್ಟಕರ ಎಂದು ಹೇಳಿರುವ ಮುಖ್ಯಮಂತ್ರಿಗಳು, ಜನರು ಭ್ರಾತೃತ್ವವನ್ನು ಎತ್ತಿ ಹಿಡಿಯುವಂತೆ ಮನವಿ ಮಾಡಿದ್ದಾರೆ.

ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ಗೆಹಲೋತ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.