ADVERTISEMENT

ಪಶ್ಚಿಮ ಬಂಗಾಳ: ವಂದೇ ಭಾರತ್‌ ರೈಲು ಆರಂಭವಾದ ನಾಲ್ಕೇ ದಿನಕ್ಕೆ ಕಲ್ಲು ತೂರಾಟ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಜನವರಿ 2023, 4:56 IST
Last Updated 3 ಜನವರಿ 2023, 4:56 IST
ವಂದೇ ಭಾರತ್‌ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. (ಟ್ವಿಟರ್ ಚಿತ್ರ)
ವಂದೇ ಭಾರತ್‌ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. (ಟ್ವಿಟರ್ ಚಿತ್ರ)   

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಸೇವೆ ಆರಂಭಿಸಿದ ನಾಲ್ಕೇ ದಿನಕ್ಕೆ ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಪಶ್ಚಿಮ ಬಂಗಾಳದ ಮಾಲ್ಡಾ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ರೈಲಿನ ಕಿಟಕಿಗೆ ಹಾನಿಯಾಗಿದೆ.

ಕಲ್ಲು ತೂರಾಟದಿಂದ ಯಾರಿಗೂ ಗಾಯವಾಗಿಲ್ಲ. ರೈಲ್ವೆ ಸಂರಕ್ಷಣಾ ಪಡೆ ಈ ಕುರಿತು ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಹೌರಾ – ಜಲ್‌ಪೈಗುರಿ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಡಿ.31ರಂದು (ಶನಿವಾರ) ಚಾಲನೆ ನೀಡಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ್‌ ರೈಲು ಮತ್ತು ಇತರ ಅಭಿವೃದ್ಧಿ ಯೋಜನೆಗಳಿಗೆ ವರ್ಚುವಲ್‌ ಆಗಿ ಚಾಲನೆ ನೀಡಿದ್ದರು.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಮತ್ತು ರಾಜ್ಯಪಾಲ ಸಿ.ವಿ. ಆನಂದ ಬೋಸ್‌ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.