ADVERTISEMENT

ಕೇರಳದಲ್ಲಿ ಬೀದಿನಾಯಿ ಹಾವಳಿ: ಪಶುವೈದ್ಯರಿಗೆ ರೇಬಿಸ್‌ ನಿರೋಧಕ ಲಸಿಕೆ

ಪಿಟಿಐ
Published 20 ಸೆಪ್ಟೆಂಬರ್ 2022, 11:17 IST
Last Updated 20 ಸೆಪ್ಟೆಂಬರ್ 2022, 11:17 IST
–ಪ್ರಾತಿನಿಧಿಕ ಚಿತ್ರ
–ಪ್ರಾತಿನಿಧಿಕ ಚಿತ್ರ   

ತಿರುವನಂತಪುರ: ಕೇರಳದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳ ನೌಕರರಿಗೆ ರೇಬಿಸ್‌ ನಿರೋಧಕ ಲಸಿಕೆ ನೀಡುವ ಅಭಿಯಾನಕ್ಕೆ ಆರೋಗ್ಯ ಇಲಾಖೆ ಚಾಲನೆ ನೀಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪಶುಸಂಗೋಪನೆ ಇಲಾಖೆ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಅಧೀನದಲ್ಲಿ ನಾಯಿಗಳಿಗೆ ಲಸಿಕೆ ನೀಡುವ ಕಾರ್ಯ ಹಾಗೂ ಅವುಗಳ ಸಂತಾನ ಶಕ್ತಿ ಹರಣ ಶಸ್ತ್ರ ಚಿಕಿತ್ಸೆ ನಡೆಯುತ್ತಿದೆ. ಈ ಕಾರಣಕ್ಕೆ ಈ ಇಲಾಖೆಗಳಲ್ಲಿರುವ ಪಶುವೈದ್ಯರು ಮತ್ತು ಇತರ ಸಿಬ್ಬಂದಿಗೆ ಮುಂಜಾಗ್ರತಾ ಕ್ರಮವಾಗಿ ರೇಬಿಸ್‌ ನಿರೋಧಕ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT