ADVERTISEMENT

ಆಶ್ರಯ ಕೇಂದ್ರಗಳಿಗೆ ಬೀದಿನಾಯಿ: SC ನಿರ್ದೇಶನ ಕಾರ್ಯಸಾಧುವಲ್ಲ; ಮನೇಕಾ ಗಾಂಧಿ

ಪಿಟಿಐ
Published 13 ನವೆಂಬರ್ 2025, 14:17 IST
Last Updated 13 ನವೆಂಬರ್ 2025, 14:17 IST
ಮನೇಕಾ ಗಾಂಧಿ
ಮನೇಕಾ ಗಾಂಧಿ   

ನವದೆಹಲಿ: ಬೀದಿನಾಯಿಗಳನ್ನು ಸ್ಥಳಾಂತರ ಮಾಡುವಂತೆ ಮತ್ತು ಅವುಗಳನ್ನು ಆಶ್ರಯ ಕೇಂದ್ರಗಳಲ್ಲಿ (ಡಾಗ್‌ ಶೆಲ್ಟರ್‌) ಸಲಹುವಂತೆ ಸುಪ್ರೀಂ ಕೋರ್ಟ್‌ ಇತ್ತೀಚೆಗೆ ನೀಡಿರುವ ನಿರ್ದೇಶನವು ಕಾರ್ಯಸಾಧುವಲ್ಲ ಎಂದು ಪ್ರಾಣಿ ಹಕ್ಕುಗಳ ರಕ್ಷಣಾ ಕಾರ್ಯಕರ್ತೆ ಹಾಗೂ ಕೇಂದ್ರದ ಮಾಜಿ ಸಚಿವೆ ಮೇನಕಾ ಗಾಂಧಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಾಣಿಗಳ ಬಗ್ಗೆ ಭಾರತಕ್ಕೆ ಇರುವ ಸಹಾನುಭೂತಿಯು ಮತ್ತೊಬ್ಬರಿಗೆ ಮಾರ್ಗದರ್ಶಿ ಆಗುವಂತಿರಬೇಕು ಎಂದು ಅವರು ಹೇಳಿದ್ದಾರೆ.

ಶಾಲೆ–ಕಾಲೇಜುಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಲ್ಲಿ ನಾಯಿ ಕಡಿತ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್‌, ಅಂತಹ ಶ್ವಾನಗಳನ್ನು ನಿರ್ದಿಷ್ಟ ಆಶ್ರಯ ಕೇಂದ್ರಗಳಿಗೆ ಸ್ಥಳಾಂತರಿಸುವಂತೆ ಕಳೆದವಾರ ನಿರ್ದೇಶನ ನೀಡಿತ್ತು.

ADVERTISEMENT

‘ಶ್ವಾನ, ಬೆಕ್ಕು, ಕೋತಿಗಳನ್ನು ಹಿಡಿದು ಆಶ್ರಯ ಕೇಂದ್ರಗಳಿಗೆ ಹಾಕಿ, ಸಂತಾನಶಕ್ತಿಹರಣ ಚಿಕಿತ್ಸೆ ಮಾಡಿ ಎಂದು ಸುಪ್ರೀಂ ಕೋರ್ಟ್ ಹೇಳುತ್ತದೆ. ಆದರೆ ಯಾರೂ ಇದನ್ನು ಮಾಡುವುದಿಲ್ಲ. ಇದು ಕಾರ್ಯಸಾಧ್ಯವೂ ಅಲ್ಲ’ ಎಂದು ಪ್ರಶ್ನೆಯೊಂದಕ್ಕೆ ಮೇನಕಾ ಉತ್ತರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.