ADVERTISEMENT

ಪಿಯು ಪರೀಕ್ಷೆ ಬರೆಯುವಾಗ ಮೊಬೈಲ್‌ ಪತ್ತೆಯಾದರೆ ಕಠಿಣ ಕ್ರಮ

ಪಶ್ಚಿಮ ಬಂಗಾಳ ಪ್ರೌಢ ಶಿಕ್ಷಣ ಮಂಡಳಿ ಎಚ್ಚರಿಕೆ

ಪಿಟಿಐ
Published 23 ಫೆಬ್ರುವರಿ 2019, 12:42 IST
Last Updated 23 ಫೆಬ್ರುವರಿ 2019, 12:42 IST

ಕೋಲ್ಕತ್ತ: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವಾಗ ವಿದ್ಯಾರ್ಥಿಗಳು ಮೊಬೈಲ್‌ ಇಟ್ಟುಕೊಂಡಿರುವುದು ಪತ್ತೆಯಾದರೆ ಅಂತಹ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಳದ ಪ್ರೌಢ ಶಿಕ್ಷಣ ಮಂಡಳಿ ಎಚ್ಚರಿಕೆ ನೀಡಿದೆ.‌

‘ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳ ಬಳಿ ಮೊಬೈಲ್‌ ಪತ್ತೆಯಾದರೆ ಖಂಡಿತಾ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಪ್ರಶ್ನೆ ಪತ್ರಿಕೆ ಕಸಿದುಕೊಂಡು, ವಿದ್ಯಾರ್ಥಿಯ ನೋಂದಣಿ ರದ್ದುಪಡಿಸಲಾಗುವುದು’ ಎಂದು ಮಂಡಳಿ ಅಧ್ಯಕ್ಷ ಮಹುವಾ ದಾಸ್ ತಿಳಿಸಿದ್ದಾರೆ.

ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮಾರ್ಗದರ್ಶನ ನೀಡಲು ಮಂಡಳಿಯು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಅವರು ತಿಳಿಸಿದರು.

ADVERTISEMENT

ಇದೇ ಫೆಬ್ರುವರಿ 26ರಿಂದ ಮಾರ್ಚ್‌ 13ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.