ಪತ್ತನಂತಿಟ್ಟ(ಕೇರಳ): ನಕಲಿ ಪ್ರವೇಶಪತ್ರವನ್ನು ಪಡೆದು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಬರೆಯಲು ಹಾಜರಾಗಿದ್ದ ವಿದ್ಯಾರ್ಥಿಯೊಬ್ಬನನ್ನು ಇಲ್ಲಿನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವುದಾಗಿಯೂ ತಿಳಿಸಿದ್ದಾರೆ.
ತಿರುವನಂತಪುರದಲ್ಲಿರುವ ಅಕ್ಷಯಾ ಸೆಂಟರ್‌ನ ಆಪರೇಟರ್ ಒಬ್ಬರು ವಾಟ್ಸ್‌ಆ್ಯಪ್ ಮೂಲಕ ಕಳುಹಿಸಿದ್ದ ಪ್ರವೇಶ ಪ್ರತಿಯನ್ನು ಪ್ರಿಂಟ್ ತೆಗೆದುಕೊಂಡು ಪರೀಕ್ಷೆ ಬರೆಯಲು ಬಂದಿದ್ದಾಗಿ ವಿದ್ಯಾರ್ಥಿ ಒಪ್ಪಿಕೊಂಡಿದ್ದಾನೆ. ಆತನ ಹೇಳಿಕೆಯನ್ನು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರವೇಶಪತ್ರದಲ್ಲಿ ನಮೂದಿಸಿದ ಹೆಸರು, ವಿಳಾಸ ಮತ್ತು ಪರೀಕ್ಷಾ ಕೇಂದ್ರದ ಮಾಹಿತಿಯಲ್ಲಿ ವ್ಯತ್ಯಾಸ ಕಂಡಬಂದ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಪೊಲೀಸರಿಗೆ ದೂರು ನೀಡಿದರು. ಈ ಕಾರಣ ವಿದ್ಯಾರ್ಥಿಯನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.