ADVERTISEMENT

ಪಂಜಾಬ್ ಖಾಸಗಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಆತ್ಮಹತ್ಯೆ; ವ್ಯಾಪಕ ಪ್ರತಿಭಟನೆ

ಪಿಟಿಐ
Published 21 ಸೆಪ್ಟೆಂಬರ್ 2022, 10:45 IST
Last Updated 21 ಸೆಪ್ಟೆಂಬರ್ 2022, 10:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಫಾಗ್ವಾರ: ಪಂಜಾಬ್‌ನ ಫಾಗ್ವಾರದ ಖಾಸಗಿ ವಿಶ್ವವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಂಪಸ್‌ನ ಇತರೆ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿಯಲ್ಲಿ (ಎಲ್‌ಪಿಯು) ಬ್ಯಾಚುಲರ್ ಆಫ್ ಡಿಸೈನ್ ವ್ಯಾಸಂಗ ಮಾಡುತ್ತಿದ್ದ ಕೇರಳದ 22 ವರ್ಷದ ವಿದ್ಯಾರ್ಥಿ ಸೆಪ್ಟೆಂಬರ್ 20ರಂದು ಆತ್ಮಹತ್ಮೆ ಮಾಡಿದ್ದಾನೆಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ವಿದ್ಯಾರ್ಥಿಯು ವೈಯಕ್ತಿಕ ಸಮಸ್ಯೆಗಳ ಬಗ್ಗೆ ಡೆತ್ ನೋಟ್‌ನಲ್ಲಿ ಬರೆದಿಟ್ಟಿದ್ದಾಗಿ ಫಾಗ್ವಾರದ ಉಪ ಪೊಲೀಸ್ ವರಿಷ್ಠಾಧಿಕಾರಿಜಸ್‌ಪ್ರೀತ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ:

ವಿದ್ಯಾರ್ಥಿಯ ಸಾವಿಗೆ ನ್ಯಾಯ ಸಿಗಬೇಕು ಎಂದು ಘೋಷಣೆ ಕೂಗಿ ಎಲ್‌ಪಿಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳು ವ್ಯಾಪಕ ಪ್ರತಿಭಟನೆ ನಡೆಸಿದ್ದಾರೆ.

ಇತ್ತೀಚೆಗಷ್ಟೇ ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವಿಡಿಯೊಗಳನ್ನು ಚಿತ್ರೀಕರಿಸಲಾಗಿತ್ತು ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾಪಕ ಪ್ರತಿಭಟನೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.