ಮೊರಾದಾಬಾದ್(ಉತ್ತರಪ್ರದೇಶ): ತನ್ನ ತಾಯಿ ಗದರಿದಳು ಎಂಬ ಕಾರಣಕ್ಕೆ 6ನೇ ತರಗತಿ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕೃಷ್ಣ ಎಂದು ಗುರುತಿಸಲಾಗಿದೆ.
ನಿನ್ನೆ (ಶನಿವಾರ) 3 ಗಂಟೆ ಸುಮಾರಿಗೆ ಸಣ್ಣ ವಿಚಾರಕ್ಕೆ ಮಗನನ್ನು ಬೈದು ಕೋಣೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದೆ. ಸಂಜೆ ಮನೆಗೆ ಹಿಂತಿರುಗಿದಾಗ, ತನ್ನ ಮಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಮೃತನ ತಾಯಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಒಬ್ಬನೇ ಮಗನೊಂದಿಗೆ ಬಾಡಿಗೆ ಮನೆಯಲ್ಲಿ ಮಹಿಳೆ ವಾಸಿಸುತ್ತಿದ್ದರು. ಆಕೆಯ ಪತಿ ಮದ್ಯ ವ್ಯಸನಿಯಾಗಿದ್ದು ನಿತ್ಯ ಜಗಳ ಮಾಡುತ್ತಿದ್ದನು. ಇತ್ತೀಚೆಗೆ ಮನೆಬಿಟ್ಟು ಹೋಗಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ದೇವೇಂದ್ರ ಸಿಂಗ್ ತಿಳಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.