ನವದೆಹಲಿ: ಖರಗಪುರ ಐಐಟಿ ಹಾಗೂ ಗ್ರೇಟರ್ ನೋಯ್ಡಾದ ಶಾರದಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಕುರಿತು ಸುಪ್ರೀಂ ಕೋರ್ಟ್ ಕೆಲ ಪ್ರಶ್ನೆಗಳನ್ನು ಎತ್ತಿದ್ದು, ಎರಡೂ ಪ್ರಕರಣಗಳ ತನಿಖೆಯನ್ನು ತ್ವರಿತವಾಗಿ ನಡೆಸಬೇಕು ಎಂದು ಸೋಮವಾರ ನಿರ್ದೇಶನ ನೀಡಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ಆತ್ಮಹತ್ಯೆ ಪ್ರಕರಣಗಳ ಕುರಿತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಹಾಗೂ ಆರ್.ಮಹದೇವನ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.
ನಾಲ್ಕನೇ ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯ ಆತ್ಮಹತ್ಯೆ ಪ್ರಕರಣದ ವಿಚಾರಣೆ ನಡೆಸಿದ ಪೀಠವು, ‘ಖರಗಪುರ ಐಐಟಿಯಲ್ಲಿ ಏನು ತಪ್ಪಾಗಿದೆ? ವಿದ್ಯಾರ್ಥಿಗಳು ಏಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ? ಈ ಸಮಸ್ಯೆಗಳ ಬಗ್ಗೆ ನೀವು ಯೋಚಿಸಿದ್ದೀರಾ? ಏನು ಕ್ರಮಗಳನ್ನು ತೆಗೆದುಕೊಂಡಿದ್ದೀರಿ’ ಎಂದು ಖರಗಪುರ ಐಐಟಿಯ ವಕೀಲರನ್ನು ಪ್ರಶ್ನಿಸಿದೆ.
ಶಾರದಾ ವಿಶ್ವವಿದ್ಯಾಲಯದಲ್ಲೂ ವಿದ್ಯಾರ್ಥಿನಿಯೊಬ್ಬಳು ಇದೇ ರೀತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಎರಡೂ ಪ್ರಕರಣಗಳ ತನಿಖೆಯನ್ನು ತ್ವರಿತವಾಗಿ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.