ADVERTISEMENT

ದೆಹಲಿ: ವಿದ್ಯಾರ್ಥಿಗಳಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆ

ಪಿಟಿಐ
Published 22 ಡಿಸೆಂಬರ್ 2024, 7:12 IST
Last Updated 22 ಡಿಸೆಂಬರ್ 2024, 7:12 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ದೆಹಲಿಯ ಮೂರು ಶಾಲೆಗಳಿಗೆ ಆ ಶಾಲೆಗಳ ವಿದ್ಯಾರ್ಥಿಗಳೇ ಬಾಂಬ್ ಬೆದರಿಕೆ ಇಮೇಲ್‌ ಕಳುಹಿಸಿದ್ದಾರೆ ಎಂಬ ಸಂಗತಿ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ನವೆಂಬರ್ 28ರಂದು ರೋಹಿಣಿ ಪ್ರಶಾಂತ್ ವಿಹಾರ್ ಪಿವಿಆರ್ ಮಲ್ಟಿಪ್ಲೆಕ್ಸ್‌ನಲ್ಲಿ ನಿಗೂಢ ಸ್ಫೋಟ ಸಂಭವಿಸಿದ ಒಂದು ದಿನದ ಬಳಿಕ ವೆಂಕಟೇಶ್ವರ್ ಗ್ಲೋಬಲ್ ಸ್ಕೂಲ್ ಸೇರಿದಂತೆ ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಲಾಗಿತ್ತು.

ADVERTISEMENT

ಪರೀಕ್ಷೆಗಳನ್ನು ಮುಂದೂಡಲಿ ಎಂದು ಇಮೇಲ್ ಕಳುಹಿಸಿದೆವು. ಹಿಂದಿನ ಘಟನೆಗಳಿಂದ(ಶಾಲೆಗಳಿಗೆ ಬಾಂಬ್‌ ಬೆದರಿಕೆ) ಈ ಆಲೋಚನೆ ಬಂದಿತು ಎಂದು ವಿದ್ಯಾರ್ಥಿಗಳು ಕೌನ್ಸೆಲಿಂಗ್ ವೇಳೆ ಬಾಯ್ಬಿಟಿದ್ದಾರೆ. ಕೌನ್ಸೆಲಿಂಗ್ ಬಳಿಕ, ಪೋಷಕರಿಗೆ ಎಚ್ಚರಿಕೆ ನೀಡಿ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

‌‌ಇನ್ನು ರೋಹಿಣಿ ಮತ್ತು ಪಶ್ಚಿಮ ವಿಹಾರ್‌ನಲ್ಲಿರುವ ಎರಡು ಶಾಲೆಗಳಿಗೆ ಅಲ್ಲಿನ ವಿದ್ಯಾರ್ಥಿಗಳೇ ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಿದ್ದಾರೆ. ಶಾಲೆಗಳನ್ನು ಬಂದ್‌ ಮಾಡಲು ವಿದ್ಯಾರ್ಥಿಗಳು ಇಮೇಲ್ ಕಳುಹಿಸಿದ್ದರು ಎಂದು ಮತ್ತೋರ್ವ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕಳೆದ 11 ದಿನಗಳಲ್ಲಿ ದೆಹಲಿಯ 100ಕ್ಕೂ ಹೆಚ್ಚು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಹಾಕಲಾಗಿದೆ. ಇಮೇಲ್‌ಗಳನ್ನು ವಿಪಿಎನ್ (ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್) ಮೂಲಕ ಕಳುಹಿಸಲಾಗಿದ್ದು, ಇದರಿಂದ ಅಪರಾಧಿಗಳನ್ನು ಪತ್ತೆಹಚ್ಚುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.