ADVERTISEMENT

ಎಲ್ಲ ಧರ್ಮದ ವಿದ್ಯಾರ್ಥಿಗಳು ಶಾಲೆಗಳ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು: ಅಮಿತ್ ಶಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಫೆಬ್ರುವರಿ 2022, 10:01 IST
Last Updated 21 ಫೆಬ್ರುವರಿ 2022, 10:01 IST
ಅಮಿತ್ ಶಾ
ಅಮಿತ್ ಶಾ   

ನವದೆಹಲಿ: ಹಿಜಾಬ್ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಎಲ್ಲ ಧರ್ಮದ ವಿದ್ಯಾರ್ಥಿಗಳು ಶಾಲೆ ಮತ್ತು ಕಾಲೇಜುಗಳಲ್ಲಿ ಸೂಚಿಸಿದ ಸಮವಸ್ತ್ರ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಹೇಳಿದ್ದಾರೆ.

'ಸಿಎನ್‌ಎನ್ ನ್ಯೂಸ್ 18'ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, 'ಧರ್ಮವನ್ನು ಲೆಕ್ಕಿಸದೆ ಕಡ್ಡಾಯವಾಗಿ ಸಮವಸ್ತ್ರ ಧರಿಸುವ ನಿಮಯವನ್ನು ಪಾಲನೆ ಮಾಡಬೇಕು ಎಂದು ನಾನು ವೈಯಕ್ತಿಕವಾಗಿ ನಂಬುತ್ತೇನೆ' ಎಂದು ತಿಳಿಸಿದ್ದಾರೆ.

'ಈ ವಿಷಯವು ನ್ಯಾಯಾಲಯದ ಪರಿಧಿಯಲ್ಲಿದ್ದು, ತೀರ್ಪನ್ನು ಎಲ್ಲರೂ ಒಪ್ಪಿಕೊಳ್ಳಬೇಕು. ನ್ಯಾಯಾಲದಯ ತೀರ್ಪು ನೀಡುವವರೆಗೂ ನನ್ನ ವೈಯಕ್ತಿಕ ನಿಲುವಿನಲ್ಲಿ ನಂಬಿಕೆ ಇರಿಸುತ್ತೇನೆ. ಆದರೆ ನ್ಯಾಯಾಲದ ತೀರ್ಪು ಏನೇ ಆದರೂ ಅದನ್ನು ಒಪ್ಪಿಕೊಳ್ಳುತ್ತೇನೆ' ಎಂದು ಹೇಳಿದರು.

ಈ ವಿವಾದವನ್ನು ವಿರೋಧ ಪಕ್ಷಗಳು ರಾಜಕೀಯಗೊಳಿಸಲು ಬಯಸುತ್ತಿವೆ. ಆದರೆ ಅವರು ಯಶಸ್ವಿಯಾಗುವುದಿಲ್ಲ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.