ADVERTISEMENT

ಕೋವಿಶೀಲ್ಡ್, ಕೋವ್ಯಾಕ್ಸಿನ್ ಡೋಸ್ ಮಿಶ್ರ ಪ್ರಯೋಗದಿಂದ ಉತ್ತಮ ಫಲಿತಾಂಶ: ಐಸಿಎಂಆರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಆಗಸ್ಟ್ 2021, 6:09 IST
Last Updated 8 ಆಗಸ್ಟ್ 2021, 6:09 IST
ಸಾಂದರ್ಭಿಕ ಚಿತ್ರ – ಎಎಫ್‌ಪಿ
ಸಾಂದರ್ಭಿಕ ಚಿತ್ರ – ಎಎಫ್‌ಪಿ   

ನವದೆಹಲಿ: ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆ ಡೋಸ್‌ಗಳ ಮಿಶ್ರ ಪ್ರಯೋಗದಿಂದ ಉತ್ತಮ ಫಲಿತಾಂಶ ದೊರೆತಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ.

ಪ್ರಯೋಗದಿಂದ ಉತ್ತಮ ಫಲಿತಾಂಶ ದೊರೆತಿದೆ. ವೈರಸ್ ವಿರುದ್ಧ ಉತ್ತಮ ಪ್ರತಿರೋಧ ಶಕ್ತಿ ಸೃಷ್ಟಿಯಾಗಿರುವುದು ಈ ಅಧ್ಯಯನದಲ್ಲಿ ದೃಢಪಟ್ಟಿದೆ ಎಂಬ ಐಸಿಎಂಆರ್‌ ಹೇಳಿಕೆಯನ್ನು ‘ಎಎನ್‌ಐ’ ಟ್ವೀಟ್ ಮಾಡಿದೆ.

ಒಬ್ಬ ವ್ಯಕ್ತಿಗೆ ಎರಡು ಭಿನ್ನ ಲಸಿಕೆಗಳ (ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್) ಡೋಸ್‌ ನೀಡುವ ಪ್ರಯೋಗಕ್ಕೆ ತಜ್ಞರ ಸಮಿತಿ ಶಿಫಾರಸು ಮಾಡಿದೆ ಎಂದು ಇತ್ತೀಚೆಗೆ ವರದಿಯಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.