ADVERTISEMENT

ಪಶ್ಚಿಮ ಬಂಗಾಳ: ಖಾಲಿ ಉತ್ತರ ಪತ್ರಿಕೆ ನೀಡಿದವರಿಗೂ ನೇಮಕಾತಿ ಪತ್ರ

ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣ

​ಪ್ರಜಾವಾಣಿ ವಾರ್ತೆ
Published 11 ಜೂನ್ 2022, 13:46 IST
Last Updated 11 ಜೂನ್ 2022, 13:46 IST

ಕೋಲ್ಕತ್ತ (ಪಿಟಿಐ):ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಅಕ್ರಮದಲ್ಲಿ ಪಶ್ಚಿಮ ಬಂಗಾಳ ಶಿಕ್ಷಣ ಇಲಾಖೆಯ ಹಲವು ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಸಿಬಿಐ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆ ಪ್ರಕಾರ, ಖಾಲಿ ಉತ್ತರ ಪತ್ರಿಕೆ ನೀಡಿದ ಅಭ್ಯರ್ಥಿಗಳಿಗೂ ನೇಮಕಾತಿ ಪತ್ರ ನೀಡಿರುವುದು ಪತ್ತೆಯಾಗಿದೆ. ಉತ್ತರ ಪತ್ರಿಕೆಯಲ್ಲಿ ಕೇವಲ ತಮ್ಮ ಹೆಸರು, ನೋಂದಣಿ ಸಂಖ್ಯೆ ಮಾತ್ರ ನಮೂದಿಸಿದ್ದಾರೆ. ಅಕ್ರಮದಲ್ಲಿ ಕಿರಿಯ ಅಧಿಕಾರಿಗಳು, ಗುಮಾಸ್ತರು ಶಾಮೀಲಾಗಿದ್ದಾರೆ ಎಂದು ಅವರು ಆರೋಪಿಸಿದರು.

ಹೆಸರು, ನೋಂದಣಿ ಸಂಖ್ಯೆ ಇರುವ ಹಲವು ಉತ್ತರ ಪತ್ರಿಕೆಗಳು ಪತ್ತೆಯಾಗಿವೆ. ನೇಮಕಾತಿಗೂ ಮೊದಲು ಅಧಿಕಾರಿಗಳು ಮತ್ತು ಅಭ್ಯರ್ಥಿಗಳ ನಡುವೆ ಭಾರಿ ಹಣದ ವಹಿವಾಟು ನಡೆದಿರುವ ಬಗ್ಗೆ ಸಾಕ್ಷ್ಯಗಳು ದೊರೆತಿದೆ ಎಂದು ತಿಳಿಸಿದರು.

ADVERTISEMENT

ಹೈಕೋರ್ಟ್‌ ಸೂಚನೆ ಮೇರೆಗೆ ಸಿಬಿಐ ತಖೆ ನಡೆಸುತ್ತಿದ್ದು, ಈ ಸಂಬಂಧ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಅವರನ್ನು ವಿಚಾರಣೆಗೆ ಒಳಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.