ADVERTISEMENT

ಯೂರಿಯಾಯೇತರ ರಸಗೊಬ್ಬರ ಸಬ್ಸಿಡಿ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2019, 5:04 IST
Last Updated 1 ಆಗಸ್ಟ್ 2019, 5:04 IST
   

ನವದೆಹಲಿ: ಯೂರಿಯಾಯೇತರ ರಸಗೊಬ್ಬರಗಳನ್ನು ಹೆಚ್ಚು ಬಳಸುವಂತೆ ರೈತರನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ರಸಗೊಬ್ಬರಗಳಿಗೆ ನೀಡುವ ಸಬ್ಸಿಡಿಯನ್ನು ಹೆಚ್ಚಿಸಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ರಾಷ್ಟ್ರದ ಬೊಕ್ಕಸಕ್ಕೆ ಈ ಆರ್ಥಿಕ ವರ್ಷ ₹ 22,875.50 ಕೋಟಿ ಹೊರೆ ಬೀಳಲಿದೆ.

ಸಾರಜನಕಕ್ಕೆ ನೀಡುವ ಸಬ್ಸಿಡಿಯನ್ನು ಪ್ರತಿ ಕೆ.ಜಿಗೆ ₹ 18.90 ನಿಗದಿಪಡಿಸಲಾಗಿದೆ. ರಂಜಕ– ₹ 15.11 (ಪ್ರತಿ ಕೆ.ಜಿಗೆ), ಪೊಟ್ಯಾಷ್‌– ₹ 11.12 ಹಾಗೂ ಪ್ರತಿ ಕೆ.ಜಿ ಗಂಧಕಕ್ಕೆ ₹ 3.56 ಸಬ್ಸಿಡಿ ನಿಗದಿ ಮಾಡಲಾಗಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಪ್ರಕಾಶ್‌ ಜಾವಡೇಕರ್‌ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.