ADVERTISEMENT

ಸಿಖ್ ವ್ಯಕ್ತಿಯ ಮೇಲೆ ಚಪ್ಪಲಿ ಎಸೆದ ಆರೋಪ: ಕೇಂದ್ರ ಸಚಿವ ಸುಕಾಂತ ವಿರುದ್ಧ FIR

ಪಿಟಿಐ
Published 16 ಜೂನ್ 2025, 2:16 IST
Last Updated 16 ಜೂನ್ 2025, 2:16 IST
<div class="paragraphs"><p>ಸುಕಾಂತ ಮಜುಂದಾರ್‌</p></div>

ಸುಕಾಂತ ಮಜುಂದಾರ್‌

   

–ಪಿಟಿಐ ಚಿತ್ರ

ಕೋಲ್ಕತ್ತ: ಸಿಖ್ ವ್ಯಕ್ತಿಯ ಮೇಲೆ ಚಪ್ಪಲಿ ಎಸೆದ ಆರೋಪದ ಮೇಲೆ ಕೇಂದ್ರ ಶಿಕ್ಷಣ ಸಚಿವಾಲಯದ ರಾಜ್ಯ ಖಾತೆ ಸಚಿವ ಸುಕಾಂತ ಮಜುಂದಾರ್‌ ವಿರುದ್ಧ ಕೋಲ್ಕತ್ತದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಹೇಳಿದೆ. ಇತ್ತ ಬಿಜೆಪಿ ಆರೋಪಗಳನ್ನು ತಳ್ಳಿಹಾಕಿದೆ.

ADVERTISEMENT

ಜೂನ್ 13ರಂದು ದಕ್ಷಿಣ ಕೋಲ್ಕತ್ತದ ಕಾಲಿಘಾಟ್ ಪೊಲೀಸ್ ಠಾಣೆಯಲ್ಲಿ ಸುಕಾಂತ ಮಜುಂದಾರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಜೂನ್ 12ರಂದು ಬಿಜೆಪಿ ರಾಜ್ಯ ಘಟಕದ ಆಧ್ಯಕ್ಷರೂ ಆಗಿರುವ ಮಜುಂದಾರ್‌, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಬಳಿಯ ಹಜ್ರಾ ರಸ್ತೆ ಮತ್ತು ಹರೀಶ್ ಚಟರ್ಜಿ ಬೀದಿಯ ಕ್ರಾಸಿಂಗ್‌ನಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಸಿಖ್‌ ವ್ಯಕ್ತಿಯೊಬ್ಬರ ಮೇಲೆ ಚಪ್ಪಲಿ ಎಸೆದಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಮಜುಂದಾರ್‌ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 302 (ಧಾರ್ಮಿಕ ಭಾವನೆಗಳಿಗೆ ಹಾನಿ ಮಾಡುವ ಉದ್ದೇಶ) ಮತ್ತು 115(2) (ಸ್ವಯಂಪ್ರೇರಣೆಯಿಂದ ನೋವುಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಜುಂದಾರ್‌ ವಿರುದ್ಧ ಪಶ್ಚಿಮ ಬಂಗಾಳದ ಆಡಳಿತಾರೂಢ ಟಿಎಂಸಿ, ಸಿಖ್ ಸಮುದಾಯದ ಮುಖಂಡರು ಆಕ್ರೋಶ ಹೊರಹಾಕಿದ್ದು, ಮಜುಂದಾರ್‌ ತಕ್ಷಣದ ಬೇಷರತ್‌ ಕ್ಷಮೆಯಾಚಿಸಬೇಕು. ಇಲ್ಲವಾದ್ದಲ್ಲಿ ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.